
ವಿದ್ಯಾರ್ಥಿಗಳಿಗೆ ಚಿಕ್ಕ ವಯಸ್ಸಿನಲ್ಲಿಯೇ ವ್ಯವಹಾರ ಜ್ಞಾನವನ್ನು ಕಲಿಸುವ ನಿಟ್ಟಿನಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಮೆಟ್ರಿಕ್ ಮೇಳ ಎಂಬ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದ್ದು, ಇಂದು(ಮಾ.05) ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಳ್ಳತ್ತಡ್ಕ ಇಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಕಲ್ಕುದಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮೆಟ್ರಿಕ್ ಮೇಳದಲ್ಲಿ ವಿದ್ಯಾರ್ಥಿಗಳು ಒಟ್ಟು 31 ಸ್ಟಾಲ್ ಗಳನ್ನು ಹಾಕಿದ್ದು, ತರಕಾರಿಗಳು, ಹಣ್ಣುಗಳು, ಜ್ಯೂಸ್, ತಿಂಡಿಗಳು, ಹೂವಿನ ಗಿಡಗಳು, ತರಕಾರಿ ಬೀಜಗಳು ಸೇರಿದಂತೆ ವಿವಿಧ ರೀತಿಯ ವಸ್ತುಗಳನ್ನು ಮಾರಾಟ ಮಾಡಿದರು. ಸ್ಥಳೀಯರು ಮೇಳಕ್ಕೆ ಆಗಮಿಸಿ ವಸ್ತುಗಳನ್ನು ಖರೀದಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಕಲ್ಕುದಿ, ಉಪಾಧ್ಯಕ್ಷರಾದ ಸೌಮ್ಯ, ಶಾಲಾ ಮುಖ್ಯೋಪಾಧ್ಯಾಯರಾದ ದೇವಕಿ ನೆತ್ತಾರ, ಸಹ ಶಿಕ್ಷಕಿಯರಾದ ಭವ್ಯಾ, ಜಯಶ್ರೀ, ಮಲ್ಲಿಕಾ, ಚೇತನಾ, ಹರಿಣಿ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ವಿದ್ಯಾರ್ಥಿಗಳ ಪೋಷಕರು, ಸ್ಥಳೀಯರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕರಾದ ದೇವಕಿ ನೆತ್ತಾರ ರವರು ಸ್ವಾಗತಿಸಿ, ಸಹ ಶಿಕ್ಷಕರಾದ ಭವ್ಯಾ ರವರು ಧನ್ಯವಾದ ಸಮರ್ಪಿಸಿದರು.(ವರದಿ : ಉಲ್ಲಾಸ್ ಕಜ್ಜೋಡಿ)