
ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಸಹಕಾರದೊಂದಿಗೆ ಸ್ನೇಹಶ್ರೀ ಮಹಿಳಾ ಮಂಡಲದ ದಶ ಸಂಭ್ರಮದ ದಶ ಕಾರ್ಯಕ್ರಮಗಳ ಅಂಗವಾಗಿ ಮುಟ್ಟು ಗುಟ್ಟಲ್ಲ ಹದಿ ಹರೆಯದ ಹೆಣ್ಣು ಮಕ್ಕಳಿಗೆ ಆರೋಗ್ಯ ಮಾಹಿತಿ ಕಾರ್ಯಕ್ರಮವು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ ಪ್ರಾಥಮಿಕ ವಿಭಾಗದಲ್ಲಿ ಮಾ.6 ರಂದು ನಡೆಯಿತು. ವಿಜಯಾ ಹೊಮಿಯೋ ಕ್ಲಿನಿಕ್ ಬೆಳ್ಳಾರೆಯ ವೈದ್ಯೆ ಡಾ. ವರ್ಷಿಣಿ ಶೆಣೈ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿ ಸಮರ್ಪಕ ಆರೋಗ್ಯ ಜಾಗೃತಿ ಬಾಲ್ಯದಲ್ಲಿ ದೊರೆಯಬೇಕು ಎಂದರು.
ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ ಎಸ್ ಡಿ ಎಂ ಸಿ ಕಾರ್ಯಧ್ಯಕ್ಷರಾದ ಶ್ರೀನಾಥ್ ರೈ ಬಾಳಿಲ ಕಾರ್ಯಕ್ರಮ ಉದ್ಘಾಟಿಸಿದರು. ಸ್ನೇಹಶ್ರೀ ಮಹಿಳಾ ಮಂಡಲ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಪಡ್ಪು ಅಧ್ಯಕ್ಷತೆ ವಹಿಸಿದ್ದರು. ಸ್ನೇಹಶ್ರೀ ಮಹಿಳಾ ಮಂಡಲದ ಜತೆ ಕಾರ್ಯದರ್ಶಿ ಶ್ರೀಮತಿ ಶೋಭನಾ ಪನ್ನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ ಮುಖ್ಯೋಪಾಧ್ಯಯರಾದ ಮಾಯಿಲಪ್ಪ ಜಿ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಹ ಶಿಕ್ಷಕಿ ಶ್ರೀಮತಿ ಸವಿತಾ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.