
ಸುಬ್ರಹ್ಮಣ್ಯ ರೋಟರಿ ಕ್ಲಬ್ ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್, ರೋಟರಿ ಕಣ್ಣಿನ ಆಸ್ಪತ್ರೆ ಪುತ್ತೂರು, ಪ್ರಸಾದ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು. ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ( ಅಂದತ್ವ ನಿವಾರಣ ವಿಭಾಗ )ಮಂಗಳೂರು, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಡಾ. ಸತೀಶ್ ಪೈ ಡಾ. ದಯಾನಂದ ಪೈ ಚಾರಿಟೇಬಲ್ ಟ್ರಸ್ಟ್, ಹಾಗೂ ಸೆಂಚುರಿ ಗ್ರೂಪ್ ಬೆಂಗಳೂರು ಇವರ ಸಂಯುಕ್ತ ಆಶಯದಲ್ಲಿ ಮಾರ್ಚ್ 9 ಆದಿತ್ಯವಾರ ಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ನಡೆಯಿತು.
ಶಿಬಿರದ ಉದ್ಘಾಟನೆಯನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತ್ರಿಮೂರ್ತಿ ನೆರವೇರಿಸಿ ಮಾತನಾಡುತ್ತಾ ಮನುಷ್ಯನ ದೇಹದ ಪಂಚೇಂದ್ರಿಯಗಳಲ್ಲಿ ಬಹು ಮುಖ್ಯವಾದ ಅಂಗ ಕಣ್ಣು ಕಣ್ಣನ್ನ ಜೋಪಾನವಾಗಿ ಸಂರಕ್ಷಿಸುವುದು ನಮ್ಮ ಆದ್ಯ ಕರ್ತವ್ಯವೋ ಆಗಿದೆ ಏನೇ ಸಣ್ಣ ತೊಂದರೆ ಬಂದರು ತಕ್ಷಣ ಪರೀಕ್ಷಿಸಬೇಕು ಇಂದು ರೋಟರಿ ಅಂತಹ ಸೇವಾ ಸಂಸ್ಥೆಗಳು ಉಚಿತವಾಗಿ ತಪಾಸಣೆ ಹಾಗೂ ಪರೀಕ್ಷಾ ಶಿಬಿರಗಳನ್ನ ನಡೆಸುತ್ತಿರುವುದು ಶ್ಲಾಘನೀಯ. ಎಂದು ನುಡಿದರು ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿದ ಅಧ್ಯಕ್ಷ ಚಂದ್ರಶೇಖರ ನಾಯರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯ ಭಾರತಿ ದಿನೇಶ್ ಉಪಸ್ಥಿತರಿದ್ದರು ವೇದಿಕೆಯಲ್ಲಿ ಪ್ರಸಾದ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವಿಶ್ವಾಸ್ ಸುಳ್ಯ ,ರೋಟರಿ ಜೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ, ಪೂರ್ವಾಧ್ಯಕ್ಷ ವಿಜಯಕುಮಾರ ಅಮೇಇ ಉಪಸ್ಥಿತರಿದ್ದರು. ( ಚಿತ್ರ ವರದಿ : ರತ್ನಾಕರ ಸುಬ್ರಹ್ಮಣ್ಯ)
