
ಅಮರ ಸಂಘಟನಾ ಸಮಿತಿ (ರಿ.), ಸುಳ್ಯ ಇದರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗ ಇದರ ಸಹಕಾರದೊಂದಿಗೆ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರವು ಮಾ. 16 ಭಾನುವಾರದಂದು ಕುಕ್ಕುಜಡ್ಕದ ಅಮರಮುಡ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಲಿರುವುದು. ನಾಗರಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಸಂಘಟಕರು ತಿಳಿಸಿದ್ದಾರೆ.
