Ad Widget

ಸುಳ್ಯ : ಗೌಡ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.13ರಂದು ವೆಂಕಟ್ರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು.

. . . . . . . . .

ಸಂಪನ್ಮೂಲ ವ್ಯಕ್ತಿಯಾಗಿ ಶಾರದ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸ್ವರ್ಣಕಲಾ ಎ.ಎಸ್. ಆಗಮಿಸಿ ಮಹಿಳಾ ದಿನಾಚರಣೆಯ ಕುರಿತು ಮಾತನಾಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಬಳಿಕ ಸಮಾಜದಲ್ಲಿ ವಿವಿಧ ರೀತಿಯಲ್ಲಿ ಸಾಧನೆಗೈದು ಮಾದರಿ ಎನಿಸಿರುವ ಗೌಡ ಮಹಿಳಾ ಘಟಕದ ಸ್ಥಾಪಕ ಅಧ್ಯಕ್ಷೆ ರೇಣುಕಾ ಸದಾನಂದ ಜಾಕೆ, ಹಾಗೂ ಸುಳ್ಯ ಮಹಿಳಾ ಘಟಕದ ನಿಕಟ ಪೂರ್ವಧ್ಯಕ್ಷೆ ಪುಷ್ಪಾವತಿ ಮಾಣಿಬೆಟ್ಟು ಇವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಸುಳ್ಯ ಮಹಿಳಾ ಘಟಕ ಹಾಗೂ ನಗರ ಸಮಿತಿ ವತಿಯಿಂದ ಮಹಿಳೆಯರಿಗಾಗಿ ವಿವಿಧ ಒಳಾಂಗಣ ಆಟವನ್ನು ಏರ್ಪಡಿಸಲಾಗಿದ್ದು ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ತಾ.ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ವಿನುತಾ ಪಾತಿಕಲ್ಲು, ಗೌಡ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ.ಎಸ್.ಗಂಗಾಧರ್, ವೆಂಕಟ್ರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ಅಧ್ಯಕ್ಷರಾದ ಕೆ.ಸಿ.ಸದಾನಂದ, ರೋಟರಿ ಕ್ಲಬ್ ಸುಳ್ಯ ಇದರ ಅಧ್ಯಕ್ಷೆ ಶ್ರೀಮತಿ ಯೋಗಿತಾ ಗೋಪಿನಾಥ್, ತರುಣ ಘಟಕದ ಅಧ್ಯಕ್ಷ ಪ್ರೀತಂ ಕೇರ್ಪಳ, ಗೌಡ ಯುವ ಸೇವ ಸಂಘದ ಪ್ರಧಾನ ಕಾರ್ಯದರ್ಶಿ ತೀರ್ಥರಾಮ ಅಡ್ಕಬಳೆ , ತಾಲೂಕು ಮಹಿಳಾ ಘಟಕದ ನಿರ್ದೇಶಕರಾದ ಎಮ್.ಎಚ್.ಸುರೇಶ್ ವೇದಿಕೆಯಲ್ಲಿದ್ದರು.

ತಾ.ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ವಿನುತಾ ಪಾತಿಕಲ್ಲು ಸ್ವಾಗತಿಸಿ, ಖಜಾಂಜಿ ಶ್ರೀಮತಿ ಜಯಶ್ರೀ ರಾಮಚಂದ್ರ ಪಲ್ಲತ್ತಡ್ಕ ಪ್ರಾರ್ಥಿಸಿ, ತಾಲೂಕು ಮಹಿಳಾ ಘಟಕದ ನಿರ್ದೇಶಕಿ ಭಾರತಿ ಪುರುಷೋತ್ತಮ ವಂದಿಸಿ, ಸವಿತಾ ಸಂದೇಶ್ ಕಾರ್ಯಕ್ರಮ ನಿರೂಪಿಸಿದರು. ನಗರ ಘಟಕದ ಅಧ್ಯಕ್ಷೆ ಹರ್ಷ ಕರುಣಾಕರ ಸಹಕರಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!