ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾಲೂಕು ಆಡಳಿತ ವತಿಯಿಂದ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಸ್ವಾತಂತ್ರ್ಯ ದಿನಾಚರಣೆ ಕುರಿತು ತಹಶೀಲ್ದಾರ್ ಅನಂತ ಶಂಕರ್ ರವರ ನೇತೃತ್ವದಲ್ಲಿ ಇಂದು ತಾಲೂಕು ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಕಾರ್ಯಕ್ರಮ ಈ ವರ್ಷ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.ಕೋವಿಡ್ 19 ರ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದ್ದು ಸುಳ್ಯ ಜೂನಿಯರ್ ಕಾಲೇಜ್ ಕ್ರೀಡಾಂಗಣದಲ್ಲಿ ವರ್ಷಂ ಪ್ರತಿ ನಡೆಸುವ ಎಲ್ಲಾ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಮಾಸ್ಕ್ ಗಳನ್ನು ಕಡ್ಡಾಯವಾಗಿ ಬಳಸುವುದು, ಗುಂಪು ಗುಂಪಾಗಿ ಜನರು ಸೇರದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ತಾಲೂಕು ಆಡಳಿತ ಅಧಿಕಾರಿಗಳು, ಆರೋಗ್ಯಧಿಕಾರಿ, ಶಿಕ್ಷಣ ಅಧಿಕಾರಿಗಳು, ಉಪಸ್ಥಿತರಿದ್ದರು.
- Tuesday
- December 3rd, 2024