
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಬಟ್ಟೋಡಿ ಅವರಿಗೆ ಸೇವಾ ನಿವೃತ್ತಿಗೊಂಡ ಹಿನ್ನೆಲೆಯಲ್ಲಿ ಮಾ.31 ರಂದು ಸಂಘದ ಪ್ರಧಾನ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಈ ಸಂದರ್ಭದಲ್ಲಿ ಚಂದ್ರಶೇಖರ ಬಟ್ಟೋಡಿ ಅವರಿಗೆ ಶಾಲು ಹೊದಿಸಿ ಸ್ಮರಣಿಕೆ ಹಾಗೂ ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು.
ಚಂದ್ರಶೇಖರ ಬಟ್ಟೋಡಿ ರವರ ಪತ್ನಿ ಶ್ರೀಮತಿ ಕಿರಣ, ಪುತ್ರ ಶಶಾಂಕ್.ಬಿ.ಸಿ ಹಾಗೂ ಪುತ್ರಿ ಶ್ರಾವ್ಯ.ಬಿ.ಸಿ ಜೊತೆಗಿದ್ದರು.
ಈ ಸಂದರ್ಭದಲ್ಲಿ ಸಂಘದ ಆಡಳಿತಾಧಿಕಾರಿ ಮನೋಜ್ ಮಾಣಿಬೈಲು, ನಿಕಟಪೂರ್ವ ಅಧ್ಯಕ್ಷ ಹರ್ಷಕುಮಾರ್ ದೇವಜನ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾಮ ಮಣಿಯಾನ, ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ ಕಿರಿಭಾಗ, ಮಾಜಿ ಅಧ್ಯಕ್ಷರಾದ ವಿನೂಪ್ ಮಲ್ಲಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘದ ಸಿಬ್ಬಂದಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.