ಕೆ.ವಿ.ಜಿ ವೈದ್ಯಕೀಯ ಕಾಲೇಜಿನ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದ ವೈದ್ಯಕೀಯ ಅಧಿಕಾರಿಯಾಗಿ ಡಾ| ನಂದಕುಮಾರ್ ಬಾಳಿಕಳ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸುದೀರ್ಘ 29 ವರ್ಷಗಳಿಂದ ಸೇವೆ ಸಲ್ಲಿಸಿ ಸುಳ್ಯ ತಾಲೂಕು ಆರೋಗ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗೆ ವಯೋನಿವೃತ್ತಿ ಹೊಂದಿರುವ ಡಾ| ನಂದಕುಮಾರ್ ಬಾಳಿಕಳ ರವರು ಕೆ.ವಿ.ಜಿ ವೈದ್ಯಕೀಯ ಕಾಲೇಜಿನ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಕೆ.ವಿ.ಜಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ನಿರ್ದೇಶಕರು ಹಾಗೂ ಎ.ಓ.ಎಲ್.ಇ ಅಧ್ಯಕ್ಷರೂ ಆಗಿರುವ ಡಾ| ಕೆ.ವಿ ಚಿದಾನಂದ ರವರು ಡಾ| ನಂದಕುಮಾರ್ ರವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಎ.ಓ.ಎಲ್.ಇ ಉಪಾಧ್ಯಕ್ಷರಾದ ಶ್ರೀಮತಿ ಶೋಭಾ ಚಿದಾನಂದ, ಕಾರ್ಯದರ್ಶಿ ಕೆ.ವಿ ಹೇಮನಾಥ್, ನಿರ್ದೇಶಕರುಗಳಾದ ಜಗದೀಶ್.ಎ.ಹೆಚ್ ಅಡ್ತಲೆ, ಧನಂಜಯ ಮದುವೆಗದ್ದೆ, ಕೆ.ವಿ.ಜಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಡೀನ್ ಡಾ| ನೀಲಾಂಬಿಕೆ ನಟರಾಜನ್, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ| ಲೀಲಾಧರ್.ಡಿ.ವಿ, ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿಗಳಾದ ಚಂದ್ರಶೇಖರ ಪೇರಾಲು, ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಪ್ರಾಂಶುಪಾಲರಾದ ಪ್ರೇಮಾ.ಬಿ.ಎಂ, ವೈದ್ಯಕೀಯ ಅಧೀಕ್ಷಕರಾದ ಡಾ| ಸಿ.ರಾಮಚಂದ್ರ ಭಟ್, ಡಾ| ಸುಬ್ರಹ್ಮಣ್ಯ, ಡಾ| ಗೀತಾ ದೊಪ್ಪ, ಡಾ| ನವ್ಯಾ.ಬಿ.ಎನ್, ಡಾ| ಸನತ್, ಡಾ| ವೇಣುಗೋಪಾಲ್, ಡಾ| ಅವಿನಾಶ್ ಸೇರಿದಂತೆ ಕೆ.ವಿ.ಜಿ ಗ್ರೂಪ್ ನ ಪ್ರಾಂಶುಪಾಲರು, ಆಡಳಿತಗಾರರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading