
ಪಂಜದ ಉತ್ಕರ್ಷ ಸಹಕಾರಿ ಸೌಧದಲ್ಲಿ ಕ್ರಿಯೇಟಿವ್ ಚಿತ್ರಕಲಾ ಶಾಲೆ ಪಂಜ ಇದರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಪಂಜ, ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ, ಕಲಾಮಂದಿರ ಡ್ಯಾನ್ಸ್ ಕ್ರೂ ಪಂಜ ಇವುಗಳ ಸಹಕಾರದೊಂದಿಗೆ ನಡೆಯುತ್ತಿರುವ ನಲಿ ಕಲಿ ಮಕ್ಕಳ ಬೇಸಿಗೆ ಶಿಬಿರದ ಮೂರನೇ ದಿನದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ರಂಗಕರ್ಮಿ ತುಕಾರಾಂ ಏನೆಕಲ್ ‘ಮಕ್ಕಳು ಸಹಜವಾಗಿ ಬೆಳೆಯಬೇಕು ಇಂಥ ಶಿಬಿರಗಳು ಮಕ್ಕಳನ್ನು ಸೃಜನಶೀಲರನ್ನಾಗಿಸುವ ಅವಕಾಶಗಳನ್ನು ಸೃಷ್ಟಿಸಿಕೊಡುತ್ತದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿ ಭಾಸ್ಕರ ನೆಲ್ಯಾಡಿ, ಚಂದ್ರಾಡ್ಕರ್, ತಾರಾನಾಥ್ ಕೈರಂಗಳ ಭಾಗವಹಿಸಿದ್ದರು.