Ad Widget

ಸುಮಾರು 6 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಪೈಚಾರು ಬೆಳ್ಳಾರೆ ಹಾಗೂ ನಿಂತಿಕಲ್ಲು ಬೆಳ್ಳಾರೆ ರಸ್ತೆಗಳಿಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಕೇಂದ್ರ ಸರ್ಕಾರದ ರಸ್ತೆ ಹಾಗೂ ಮೂಲಸೌಕರ್ಯ ನಿಧಿ(ಸಿಆರ್ ಐಎಫ್)ಯಡಿಯಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಎರಡು ಪ್ರಮುಖ ರಸ್ತೆಗಳ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗಳಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕಿ ಭಾಗೀರಥಿ ಮುರುಳ್ಯ ನೇತೃತ್ವದಲ್ಲಿ ಎ.15 ರಂದು ಗುದ್ದಲಿಪೂಜೆ ನೆರವೇರಿಸಲಾಯಿತು.

. . . . . . . . .

ಸಿಆರ್ ಐಎಫ್ ಅನುದಾನದಡಿ ಸುಳ್ಯ ತಾಲೂಕಿನ ನಿಂತಿಕಲ್ಲು- ಬೆಳ್ಳಾರೆ ರಸ್ತೆಯನ್ನು ಸುಮಾರು 3.72 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ರಸ್ತೆಯಲ್ಲಿ ಒಟ್ಟು ಸುಮಾರು 6.20 ಕಿಮೀ. ಮಾರ್ಗವನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ಕಾಮಗಾರಿಗಳಿಗೆ ಮಂಗಳವಾರ ಸಂಸದ ಕ್ಯಾ. ಚೌಟ ಅವರು ನಿಂತಿಕಲ್ಲು ಜಂಕ್ಷನ್ ನಲ್ಲಿ ಗುದ್ದಲಿಪೂಜೆ ನೆರವೇರಿಸಿದ್ದಾರೆ. ಅದೇ ರೀತಿ ಕೇಂದ್ರ ಸರ್ಕಾರದ ಸಿಆರ್ ಐಎಫ್ ನಿಧಿಯಡಿ ಸುಳ್ಯ-ಪೈಚಾರ್-ಬೆಳ್ಳಾರೆಯ ರಸ್ತೆಯು 2.28 ಕೋಟಿ. ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗಲಿದೆ. ಈ ರಸ್ತೆಯು ಒಟ್ಟು 3.80 ಕಿ.ಮಿ ಉನ್ನತಿಕರಣಗೊಳ್ಳಲಿದೆ. ಈ ಕಾಮಗಾರಿಗಳಿಗೆ ನಿಂತಿಕಲ್ಲಿನಲ್ಲಿ ಕ್ಯಾ. ಚೌಟ ಅವರ ನೇತೃತ್ವದಲ್ಲಿ ಗುದ್ದಲಿಪೂಜೆ ನೆರವೇರಿತು.

ನಿಂತಿಕಲ್ಲು ಪುತ್ತೂರು-ಸುಳ್ಯವನ್ನು ಸಂಪರ್ಕಿಸುವ ಗಡಿಭಾಗವಾಗಿದ್ದು, ಸುಳ್ಯ-ಪೈಚಾರ್-ಬೆಳ್ಳಾರೆ- ನಿಂತಿಕಲ್ಲು ರಸ್ತೆ ಅಭಿವೃದ್ಧಿಗೊಂಡರೆ ರಾಜ್ಯ ಹೆದ್ದಾರಿಗಳು ಮತ್ತು ಜಿಲ್ಲಾ ಮುಖ್ಯ ರಸ್ತೆಗಳಿಗೆ ಉತ್ತಮ ಸಂಪರ್ಕವನ್ನು ಒದಗಿಸಿ, ಈ ಪ್ರದೇಶದ ಒಟ್ಟಾರೆ ಸಂಪರ್ಕ ಜಾಲವನ್ನು ಬಲಪಡಿಸುತ್ತದೆ. ಜೊತೆಗೆ ಪುತ್ತೂರು, ಸುಬ್ರಹ್ಮಣ್ಯ , ಮಂಗಳೂರು, ಮಡಿಕೇರಿ ಸಂಪರ್ಕ ಸಾಧಿಸಲು ಈ ರಸ್ತೆ ಸಹಕಾರಿಯಾಗಲಿದೆ.

ಈ ಕಾರ್ಯಕ್ರಮದಲ್ಲಿ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ, ಸುಳ್ಯ ಬಿಜೆಪಿ ಮಂಡಲದ ಅಧ್ಯಕ್ಷ ವೆಂಕಟ್ ವಳಲಂಬೆ, ಮುಖಂಡರುಗಳಾದ ರಾಕೇಶ್ ರೈ ಕೆಡಿಂಜಿ, ಹರೀಶ್ ಕಂಜಿಪಿಲಿ, ವಿನಯ್ ಕುಮಾರ್ ಕಂದಡ್ಕ, ಲಕ್ಷ್ಮೀನಾರಾಯಣ ನಡ್ಕ, ಮುರುಳ್ಯ ಗ್ರಾ.ಪಂ. ಅಧ್ಯಕ್ಷೆ ವನಿತಾ ಸುವರ್ಣ, ಕಳಂಜ ಗ್ರಾ.ಪಂ. ಅಧ್ಯಕ್ಷ ಬಾಲಕೃಷ್ಣ ಬೇರಿಕೆ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಎಇಇ ಜಿತೇಂದ್ರ ಉಪಸ್ಥಿತರಿದ್ದರು.

ಚಂದ್ರಶೇಖರ ಪನ್ನೆ ಸ್ವಾಗತಿಸಿ, ಅನೂಪ್ ಬಿಳಿಮಲೆ ವಂದಿಸಿದರು. ಅಜಿತ್ ಕುಮಾರ್ ಕಿಲಂಗೋಡಿ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!