
ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ಸಂಘ ಹಾಗೂ ಐಕ್ಯೂಏಸಿ ಸಹಯೋಗದಲ್ಲಿ ಅಪೆರ್ಚರ್ 2k25 – ವಿಜ್ಞಾನಕ್ಕೆ ತೆರೆದುಕೊಳ್ಳಿ ಎಂಬ ಸೈನ್ಸ್ ಫೆಸ್ಟ್ ಕಾರ್ಯಕ್ರಮ ಎ.16 ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಸನ ಇಲ್ಲಿ ಭೌತ ವಿಜ್ಞಾನ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಲತಾ ಎಂ ಇವರು ಹಾಗೂ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಗಂಧದ ಕೋಟಿ ಇಲ್ಲಿ ಗಣಕ ವಿಜ್ಞಾನ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೊ. ಸುರೇಶ್ ಕುಮಾರ್ ಹೆಚ್ ಎಂ ಇವರಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಚಿಂತನೆ ಹಾಗೂ ಜೀವನ ಕೌಶಲ್ಯ ಕುರಿತಾದ ವಿಶೇಷ ಉಪನ್ಯಾಸಗಳನ್ನು ಹಮ್ಮಿಕೊಳ್ಳಲಾಗಿತ್ತು. ಎ.05 ರಿಂದ ವಿಜ್ಞಾನ ಸಂಘದ ವತಿಯಿಂದ ಪ್ರತಿ ದಿನ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ಈ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನಗಳನ್ನು ನೀಡಲಾಯಿತು. ವಿಜ್ಞಾನ ಸಂಘದ ವಿದ್ಯಾರ್ಥಿ ಅಧ್ಯಕ್ಷರಾದ ಶ್ರೀ ತಕ್ಷಿತ್ ಇವರು ವಿಜ್ಞಾನ ಸಂಘದ ವರದಿಯನ್ನು ಮಂಡಿಸಿದರು. ಕೋಶಾಧಿಕಾರಿಯಾದ ಕು. ಕಾವ್ಯಶ್ರೀ ಇವರು ಆಯವ್ಯಯ ವರದಿಯನ್ನು ಮಂಡಿಸಿದರು. ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಡಾ. ಪ್ರೀತಿ ಕೆ ರಾವ್, ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿಗಳಾದ ಉದಯಶಂಕರ್ ಎಚ್., ಭೌತ ವಿಜ್ಞಾನ ವಿಭಾಗ ಮುಖ್ಯಸ್ಥರಾದ ಡಾ. ಮೋನಿಷಾ, ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥರಾದ ರವೀಶ್ವರ ಎಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಜ್ಞಾನ ಸಂಘದ ಪದಾಧಿಕಾರಿಗಳು, ಕಾಲೇಜಿನ ವಿದ್ಯಾರ್ಥಿಗಳು, ಪೂರ್ವ ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗಳು ಸಕ್ರಿಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.