
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಇದರ ಸಹಯೋಗದೊಂದಿಗೆ ರಾಷ್ಟ್ರೀbಯ ಹಬ್ಬ ಆಚರಣೆ ಘಟಕದ ವತಿಯಿಂದ ದಿನಾಂಕ 17/04/25 ರಂದು ಅಂಬೇಡ್ಕರ್ ಜಯಂತಿಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ .ಟಿ ವಹಿಸಿದರು. ಅತಿಥಿಗಳು ಅಂಬೇಡ್ಕರ್ ರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನುಗೈದರು. ವಿದ್ಯಾರ್ಥಿಗಳು ಅಂಬೇಡ್ಕರ ಹಾಡುಗಳನ್ನು ಗೀತ ಗಾಯನದ ಮೂಲಕ ಪ್ರಸ್ತುತಪಡಿಸಿದರು. ಅತಿಥಿಯಾಗಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸ್ವಾತಿ ಅವರು ಅಂಬೇಡ್ಕರ್ ರವರ ಆದರ್ಶ ತತ್ವಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ತಿಳಿಸಿದರು. ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಶ್ರೀಮತಿ ಲತಾ ಬಿ.ಟಿ ಹಾಗೂ ರಾಷ್ಟ್ರೀಯ ಹಬ್ಬ ಆಚರಣೆಯ ಘಟಕದ ಸಂಯೋಜಕ ಡಾ. ದಿನೇಶ್ ಕೆ ಹಾಗೂ ಸಹ ಸಂಯೋಜಕಿ ಮಧುರ ಕೆ ಉಪಸಿತರಿದ್ದರು. ಸಂಖ್ಯಾ ಸ್ವಾಗತಿಸಿ ನಿರೂಪಿಸಿದರು.