
ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಏಪ್ರಿಲ್ 22 ಮತ್ತು 23ರಂದು ಶ್ರೀ ದೇವಿಯ ಜಾತ್ರೋತ್ಸವ ಹಾಗೂ ದೈವಗಳ ನೇಮ ಉತ್ಸವ ನಡೆಯಲಿದೆ. ಇದರ ಅಂಗವಾಗಿ ಶ್ರಮದಾನ ನಡೆಯುತ್ತಿದ್ದು, ಎ.20 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು ಶ್ರಮದಾನ ನಡೆಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯವರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.