Ad Widget

ಕುಲ್ಕುಂದ : ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಸಂಪನ್ನ

. . . . . . . . .

ಕಡಬ ತಾಲೂಕಿನ ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಏ.19 ರಿಂದ ಏ.20 ರವರೆಗೆ ವಾರ್ಷಿಕ ಜಾತ್ರೋತ್ಸವವು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಿತು.
ಏ.19 ಶನಿವಾರದಂದು ಬೆಳಿಗ್ಗೆ ಭಕ್ತಾದಿಗಳಿಂದ ಹಸಿರು ಕಾಣಿಕೆ ಸಮರ್ಪಣೆ, ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಾಯಂಕಾಲ ತಂತ್ರಿಗಳ ಆಗಮನ, ಪ್ರಾಸಾದ ಶುದ್ಧಿ, ವಾಸ್ತುಹೋಮ, ವಾಸ್ತುಬಲಿ, ಪುಣ್ಯಾಹ ವಾಚನ, ರಾತ್ರಿ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಹಾಗೂ ನಾಳ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ನಾಳ ಬೆಳ್ತಂಗಡಿ ಇವರಿಂದ “ದಕ್ಷ ಯಜ್ಞ-ಗಿರಿಜಾಕಲ್ಯಾಣ” ಯಕ್ಷಗಾನ ಬಯಲಾಟ ನಡೆಯಿತು.
ಏ.20 ರವಿವಾರದಂದು ಬೆಳಿಗ್ಗೆ ಗಣಪತಿ ಹವನ, ಕಲಶಪೂಜೆ, ಶ್ರೀ ದೇವರಿಗೆ ಬೆಳಗ್ಗಿನ ಮಹಾಪೂಜೆ, ಶತರುದ್ರಾಭಿಷೇಕ, ಪರಿವಾರ ದೇವರುಗಳಿಗೆ ಕಲಶಾಭಿಷೇಕ, ತುಂಬಿಲ ಸೇವೆ, ಶ್ರೀ ಬಸವೇಶ್ವರ ದೇವರಿಗೆ ಕಲಶಾಭಿಷೇಕ, ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಾಯಂಕಾಲ ದೀಪಾರಾಧನೆ, ತಾಯಂಬಕ, ಶ್ರೀ ರಂಗಪೂಜೆ, ಮಹಾಪೂಜೆ ಹಾಗೂ ರಾತ್ರಿ ಶ್ರೀ ಭೂತ ಬಲಿ, ಪಲ್ಲಕ್ಕಿ ಉತ್ಸವ, ವಸಂತಕಟ್ಟೆಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಂತ್ರಾಕ್ಷತೆ ಹಾಗೂ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ದೇವಳದ ಪ್ರಧಾನ ಅರ್ಚಕರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading