
ಕಲ್ಲುಗುಂಡಿ ಪೊಲೀಸ್ ಔಟ್ ಪೋಸ್ಟ್ ಬಳಿ ಏ 23 ರಂದು ತಡರಾತ್ರಿ ಸುಮಾರು ಮೂರು ಗಂಟೆಗೆ ಟ್ಯಾಂಕರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬರೆಗೆ ಗುದ್ದಿದ್ದು ಘಟನೆಯಿಂದ ಲಾರಿ ಚಾಲಕನ ಕಾಲು ಸಿಲುಕಿಕೊಂಡಿತ್ತು. ಬಳಿಕ ಸ್ಥಳೀಯರ ಸಹಕಾರದಿಂದ ಹೊರತೆಗೆಯಲಾಯಿತು. ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.