Ad Widget

ಡಾ. ಆರ್. ಕೆ. ನಾಯರ್ ರವರಿಗೆ ಶ್ರೀ ಗುರು ರಾಘವೇಂದ್ರಾನುಗ್ರಹ ಪ್ರಶಸ್ತಿಯಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳರಿಂದ ಪ್ರಶಸ್ತಿ ಪ್ರಧಾನ

. . . . . . . . .

ಸುಳ್ಯ ಶ್ರೀ ಗುರು ರಾಘವೇಂದ್ರ ಮಠದ 7 ನೇ ವರ್ಷದ ಪ್ರತಿಷ್ಠಾ ವಾರ್ಷಿಕ ಮಹೋತ್ಸವದ ಎರಡನೇಯ ದಿನದಂದು ಶ್ರೀಗುರುರಾಘವೇಂದ್ರಾನುಗ್ರಹ ಪ್ರಶಸ್ತಿ ಪ್ರಧಾನ ಸಮಾರಂಭವು ಎ.22 ರಂದು ಮಠದ ಸಭಾಭವನದಲ್ಲಿ ನಡೆಯಿತು.

ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಎಡನೀರು ಮಠದ ಸಚ್ಚಿದಾನಂದ ಭಾರತಿಶ್ರೀಪಾದಂಗಳವರು ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಗ್ರೀನ್ ಹೀರೋ ಆಫ್ ಇಂಡಿಯಾ ಪರಿಸರ ತಜ್ಞರಾದಡಾ.ಆರ್.ಕೆ.ನಾಯರ್ ರವರಿಗೆ ಸ್ವಾಮೀಜಿಯವರ ಸಮ್ಮುಖದಲ್ಲಿ ಮಠದ ವತಿಯಿಂದಕೊಡಮಾಡಲ್ಪಡುವ ಪ್ರಥಮ ವರ್ಷದ ಶ್ರೀಗುರುರಾಘವೇಂದ್ರಾನುಗ್ರಹ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಆರ್ಯಭಟ ಪ್ರಶಸ್ತಿ ಪುರಸ್ಕೃತ ಮಠದ ಬೃಂದಾವನಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ ಯವರು ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಪದ್ಮಶ್ರೀ ಪುರಸ್ಕೃತ ಗಿರೀಶ್‌ ಭಾರದ್ವಾಜ್‌, ಹಿರಿಯ ಟ್ರಸ್ಟಿ ಸುಬ್ರಹ್ಮಣ್ಯ ಮೂಡಿತ್ತಾಯ, ಕಾರ್ಯದರ್ಶಿ ರಾಮ್ ಕುಮಾರ್ ಹೆಬ್ಬಾರ್,ಕೋಶಾಧಿಕಾರಿ ಮುರಳೀಕೃಷ್ಣ ಡಿ.ಆ‌ರ್,ಸುಳ್ಯ ಸ.ಪ್ರೌ.ಶಾಲೆಯ ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ರವರು ಉಪಸ್ಥಿತರಿದ್ದರು.

ತನ್ಮಯಿ ಪ್ರಾರ್ಥಿಸಿದರು. ಶ್ರೀಮತಿ ಜಯಶೀಲಾ ಕೊಳತ್ತಾಯ ರವರು ಸ್ವಾಗತಿಸಿದರು. ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ಅಭಿನಂದನಾ ಮಾತುಗಳನ್ನಾಡಿದರು. ರಾಮ್ ಕುಮಾರ್ ಹೆಬ್ಬಾರ್ ವಂದಿಸಿದರು. ಸುದ್ದಿ ವರದಿಗಾರ ಶಿವಪ್ರಸಾದ್‌ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಟ್ರಸ್ಟಿನ ಪದಾಧಿಕಾರಿಗಳು ಮತ್ತು ಸದಸ್ಯರು ಸಹಕರಿಸಿದರು. ರಾಯರ ಭಕ್ತರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದರು. ಮಧ್ಯಾಹ್ನ ರಾಯರಿಗೆ ಅಲಂಕಾರಮಹಾಪೂಜೆಯಾಗಿ ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನ ಸಂತರ್ಪಣೆಯು ನಡೆಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!