
ನದಿಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಪೊಲೀಸರು ಮಾಹಿತಿಯನ್ನು ಪ್ರಕಟಿಸಿದ ಬೆನ್ನಲ್ಲೇ ಹಾಸನದ ತಂಡ ಆಗಮಿಸಿ ಮಹಿಳೆಯ ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ.ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯೋರ್ವರ ಮೃತದೇಹ ಎಂಬುದನ್ನು ಪತ್ತೆ ಹಚ್ಚಲಾಗಿದ್ದು ಗೀತಾ (51) ಮೃತ ಮಹಿಳೆ ಎಂದು ತಿಳಿದು ಬಂದಿದೆ. ಮಹಿಳೆಯು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಎರಡು ದಿನದ ಹಿಂದೆ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಮನೆಯವರು ವಿವಿಧೆಡೆ ಹುಡುಕಾಟ ನಡೆಸಿ, ಪೊಲೀಸ್ ಮಾಹಿತಿಯಂತೆ ಸುಬ್ರಹ್ಮಣ್ಯಕ್ಕೆ ಆಗಮಿಸಿ, ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೌಟಂಬಿಕ ಮನಸ್ಥಾಪದಿಂದ ನದಿಗೆ ಹಾರಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.