
ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚಿಸಿ ಸರಕಾರ ಅಂತಿಮ ಆದೇಶ ಮಾಡಿದೆ. ಮೇ.12ರಂದು ನಡೆದ ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಗಿ ಹರೀಶ್ ಇಂಜಾಡಿ ಅವರನ್ನು ಆಯ್ಕೆ ಮಾಡಲಾಗಿದೆ.
ಮೇ.11ರಂದು ಸುಬ್ರಹ್ಮಣ್ಯದಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಹೇಶ್ ಕುಮಾರ್ ಕರಿಕ್ಕಳ ಅವರನ್ನು ಅಧ್ಯಕ್ಷರನ್ನಾಗಿಸುವುದೆಂದು ತೀರ್ಮಾನವಾಗಿತ್ತು. ಆದರೇ ಮೇ.12 ನಡೆದ ಸಭೆಯಲ್ಲಿ ಅಧ್ಯಕ್ಷರ ಆಯ್ಕೆ ಬಗ್ಗೆ ಸಮಿತಿ ಸದಸ್ಯರುಗಳ ಮಧ್ಯೆ ಒಮ್ಮತ ಮೂಡಲಿಲ್ಲ. ಅಧ್ಯಕ್ಷತೆಗೆ ಹರೀಶ್ ಇಂಜಾಡಿ ಹಾಗೂ ಅಶೋಕ್ ನೆಕ್ರಾಜೆ ಕೂಡ ಆಕಾಂಕ್ಷಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಮಹೇಶ್ ಕುಮಾರ್ ಕರಿಕ್ಕಳ ಸಭೆಯಿಂದ ಹೊರನಡೆದ ಘಟನೆ ನಡೆಯಿತು. ಬಳಿಕ ನಡೆದ ವಿದ್ಯಮಾನದಲ್ಲಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಅಧ್ಯಕ್ಷರಾಗಿ ಆಯ್ಕೆಯಾದರು. ಸಭೆಯಲ್ಲಿ ಡಾ. ರಘು, ಅಶೋಕ್ ನೆಕ್ರಾಜೆ, ಲೀಲಾ ಮನಮೋಹನ್, ಪ್ರವೀಣ ರೈ ಮರುವಂಜ, ಅಜಿತ್ ಕಡಬ, ಸೌಮ್ಯ ಭರತ್ ಉಪಸ್ಥಿತರಿದ್ದರು.
