

ಭಾರತೀಯ ಜನತಾ ಪಾರ್ಟಿಯ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾಯಿತ ಸಹಕಾರಿಗಳ ಸಮಾವೇಶ ಸುಳ್ಯದ ಸಿಎ ಬ್ಯಾಂಕ್ ನಲ್ಲಿ ಮೇ.17 ರಂದು ನಡೆಯಿತು. ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಸಮಾವೇಶ ಉದ್ಘಾಟಿಸಿದರು. ವೇದಿಕೆಯಲ್ಲಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಸತೀಶ್ಚಂದ್ರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಮುಳುಗಾಡು, ಮಾಜಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸಿಎ ಬ್ಯಾಂಕ್ ಅಧ್ಯಕ್ಷ ವಿಕ್ರಂ ಎ.ವಿ. ಉಪಸ್ಥಿತರಿದ್ದರು. ಪ್ರದೀಪ್ ರೈ ಮನವಳಿಕೆ ಸ್ವಾಗತಿಸಿದರು. ವಿನಯಕುಮಾರ್ ಕಂದಡ್ಕ ನಿರೂಪಿಸಿದರು.