
ಮೇ 14ರಂದು ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದು ಸಾಧನೆ ಮಾಡಿದ ಹಾಗೂ ಪ್ರತಿ ವಿಷಯದಲ್ಲಿ ಶೇಕಡಾ 100 ಅಂಕಗಳನ್ನು ಗಳಿಸಿದಂತಹ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಸಂಚಾಲಕರು, ಸುಳ್ಯ ಸೈಂಟ್ ಬ್ರಿಜಿಡ್ಸ್ ಚರ್ಚ್ ನ ಧರ್ಮಗುರುಗಳಾದ ರೆ|ಫಾ|ವಿಕ್ಟರ್ ಡಿ’ಸೋಜರವರು ವಹಿಸಿದ್ದರು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ನಿಶಾಲ್ ಅಹಮದ್ ಕೆ.ಪಿ. (622), ನಿಷ್ಕ ಡಿ’ಸೋಜಾ (621), ಹೃತಿಕಾ ಕೆ.ಆರ್ (619) ಮತ್ತು ನಿಶಿಲ್ ಮೊಹಮ್ಮದ್ ಕೆ ಪಿ. (616) ಇವರನ್ನು ಸನ್ಮಾನಿಸಲಾಯಿತು. ಜೊತೆಗೆ 600 ಮತ್ತು 600ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಮತ್ತು ಪ್ರತಿ ವಿಷಯದಲ್ಲಿ 100 ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನೂ ಗೌರವಿಸಲಾಯಿತು. ಪ್ರೌಢಶಾಲಾ ವಿಭಾಗದ ಶಿಕ್ಷಕ ರಕ್ಷಕರ ಸಂಘದ ಉಪಾಧ್ಯಕ್ಷರಾದ ಶ್ರೀ ಹೇಮನಾಥ್ ಕೊಡಿಯಲ್ ಬೈಲು, ಪ್ರಾಥಮಿಕ ವಿಭಾಗದ ಉಪಾಧ್ಯಕ್ಷರಾದ ಶ್ರೀ ಶಶಿಧರ್ ಎಂ ಜೆ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಉಪಾಧ್ಯಕ್ಷರಾದ ಶ್ರೀ ಪ್ರಭೋದ್ ಶೆಟ್ಟಿ, ಸೈಂಟ್ ಬ್ರಿಜಿಡ್ಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಶ್ರೀ ನವೀನ್ ಮಚ್ಚಾದೊ,
ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಮೇರಿ ಸ್ಟೆಲ್ಲಾ, ಪ್ರೌಢಶಾಲಾ ಶಿಕ್ಷಕರ ಪ್ರತಿನಿಧಿಯಾದ ಉಷಾದೇವಿ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿನಿಧಿಯಾದ ಶ್ರೀಮತಿ ಭವ್ಯರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು . ಶಿಕ್ಷಕ ರಕ್ಷಕರ ಸಂಘದ ಪ್ರತಿನಿಧಿಗಳು, ವಿದ್ಯಾರ್ಥಿಗಳ ಹೆತ್ತವರು ಮತ್ತು ವಿದ್ಯಾಸಂಸ್ಥೆಯ ಶಿಕ್ಷಕ ಶಿಕ್ಷಕೇತರ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ರೀಟಲತಾ ಡಿ’ಸಿಲ್ವ ರವರು ವಿದ್ಯಾರ್ಥಿಗಳ ಸಾಧನೆಯನ್ನು ತಿಳಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಾಧಕ ವಿದ್ಯಾರ್ಥಿಗಳ ಪರವಾಗಿ ವಿದ್ಯಾರ್ಥಿನಿ ಹೃತಿಕಾ ಇವರು ಮಾತನಾಡಿದರು. ಶಿಕ್ಷಕಿ ಚೇತನರವರು ಸ್ವಾಗತಿಸಿ,ಶಿಕ್ಷಕಿ ಜ್ಯೋತಿ ಜೆ ರೈ ವಂದಿಸಿ, ಶಿಕ್ಷಕಿ ಅನಿತಾ ಮಸ್ಕರೇನಸ್ ರವರು ಕಾರ್ಯಕ್ರಮ ನಿರೂಪಿಸಿದರು.

