Ad Widget

ಸುಬ್ರಹ್ಮಣ್ಯ: ಕುಮಾರ ನಾಯರ್ ಅವರ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ’ ಅಭಿನಂದನಾ ಸಮಾರಂಭ – 25 ಯುನಿಟ್ ರಕ್ತ ಸಂಗ್ರಹ

. . . . . . . . .

ಸುಬ್ರಹ್ಮಣ್ಯ ಜೂನ್ 3: ಸುಬ್ರಹ್ಮಣ್ಯದ ಅನುಗ್ರಹ ಎಜುಕೇಶನ್ ಟ್ರಸ್ಟ್ ಇದರ ಸ್ಥಾಪಕ ಅಧ್ಯಕ್ಷ ದಿl ಕುಮಾರ ನಾಯರ್ ಅವರ ಜನ್ಮದಿನದ ಅಂಗವಾಗಿ ಸ್ಥಾಪಕರ ದಿನಾಚರಣೆಯನ್ನು ಬ್ಲಡ್ ಸೆಂಟರ್ ಪುತ್ತೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಜೂ.3 ರಂದು ಮಂಗಳವಾರ ಕುಮಾರಸ್ವಾಮಿ ವಿದ್ಯಾಲಯದ ಸಭಾಂಗಣದಲ್ಲಿ ಏರ್ಪಡಿಸಲಾ ಯಿತು.

. . . . . . .

ರಕ್ತದಾನ ಶಿಬಿರವನ್ನು ಸುಳ್ಯ ಸುದ್ದಿ ಬಿಡುಗಡೆಯ ಸಂಪಾದಕರಾದ ಹರೀಶ್ ಬಂಟ್ವಾಳ ದೀಪ ಬೆಳಗಿಸಿ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ವೈದ್ಯಾಧಿಕಾರಿ ಡಾ. ಕೆಪಿ ಸೀತಾರಾಮ್ ಭಟ್ ಉಪಸ್ಥಿತರಿದ್ದರು. ಗೌರವ ಉಪಸ್ಥಿತಿಯಲ್ಲಿ ಸುಬ್ರಮಣ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ವಿಶ್ವನಾಥ ನಡುತೋಟ ಉಪಸ್ಥಿತರಿದ್ಧರು. ವೇದಿಕೆಯಲ್ಲಿ ಅನುಗ್ರಹ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಗಣೇಶ್ ಪ್ರಸಾದ್, ಸಂಚಾಲಕ ಚಂದ್ರಶೇಖರ ನಾಯರ್, ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾರತ್ನ, ಪಿ.ಯು ಪ್ರಾಂಶುಪಾಲ ಸಂಕೀರ್ತ್ ಹೆಬ್ಬಾರ, ಅನುಗ್ರಹ ಟ್ರಸ್ಟ್ ನ ಉಪಾಧ್ಯಕ್ಷ ಶಿವರಾಮ ಏನೆಕಲ್ಲು, ಯಜ್ಞೇಶ್ ಆಚಾರ್, ಶಿಕ್ಷಕ ರಕ್ಷಕ ಸಂಘದ ಭಾರತಿ ದಿನೇಶ್ ಸೊಸೈಟಿ ಅಧ್ಯಕ್ಷ ವೆಂಕಟೇಶ ಎಚ್ ಎಲ್ ಮತ್ತಿತರರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯನಿ ವಿದ್ಯಾ ರತ್ನ ಸ್ವಾಗತಿಸಿದರು. ಶಿವರಾಮ್ ಏನೆಕಲ್ ಪ್ರಸ್ತಾವಿತ ಮಾತನಾಡಿದರು .ಶಿಕ್ಷಕ ಶಶಿಕಾಂತ ನಿರೂಪಿಸಿದ ಕಾರ್ಯಕ್ರಮದ ಕೊನೆಯಲ್ಲಿ ಹಿರಿಯ ಶಿಕ್ಷಕ ಉಮೇಶ ಶೆಟ್ಟಿ ಧನ್ಯವಾದ ಸಮರ್ಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading