Ad Widget

ಸುಳ್ಯ : ಬಿಜೆಪಿ ಸುಳ್ಯ ಮಂಡಲದ ನೇತೃತ್ವದಲ್ಲಿ ಯೋಗ ದಿನಾಚರಣೆ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಸುಳ್ಯದ ಕೇರ್ಪಳದಲ್ಲಿರುವ ಶ್ರೀ ದುರ್ಗಾ ಸಭಾಭವನದಲ್ಲಿ ಜೂ.21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗ ಕಾರ್ಯಕ್ರಮ ನಡೆಯಿತು.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಸುಳ್ಯ ಶಾಖೆಯ ನಿಶಿತಾ ನವೀನ್, ಸುಳ್ಯ ಬಂಟರ ಭವನ ಶಾಖೆಯ ಸುನಿತಾ ಕರುಣಾಕರ, ಹೇಮನಾಥ ಕುತ್ತಿಮುಂಡ ರವರು ಆಗಮಿಸಿ ಯೋಗದ ಮಹತ್ವವನ್ನು ಯೋಗ ಪಟುಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಸ್.ಅಂಗಾರ, ಮಂಡಲ ಸಮಿತಿಯ ಅಧ್ಯಕ್ಷರಾದ ವೆಂಕಟ್ ವಳಲಂಬೆ, ವಿಕಸಿತ ಭಾರತ ಸಂಕಲ್ಪದಿಂದ ಸಾಧನೆಯವರೆಗೆ ಸಮಿತಿಯ ಜಿಲ್ಲಾ ಸಂಚಾಲಕರಾದ ಹರೀಶ್ ಕಂಜಿಪಿಲಿ, ಜಿಲ್ಲಾ ಉಪಾಧ್ಯಕ್ಷರಾದ ರಾಕೇಶ್ ರೈ, ಕಾರ್ಯದರ್ಶಿ ವಿನಯ್ ಮುಳುಗಾಡು, ಸುಳ್ಯ ಮಂಡಲ ಸಂಚಾಲಕರಾದ ಪುಲಸ್ಯ ರೈ, ಪ್ರಧಾನ ಕಾರ್ಯದರ್ಶಿಗಳಾದ ವಿನಯ್ ಕುಮಾರ್, ಪ್ರದೀಪ್ ರೈ, ಕೋಶಾಧಿಕಾರಿ ಸುಬೋಧ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ಎ.ವಿ ತೀರ್ಥರಾಮ, ಮಹಿಳಾ ಮೋರ್ಚಾ ಅಧ್ಯಕ್ಷರಾದ ಇಂದಿರಾ.ಬಿ.ಕೆ, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading