Ad Widget

ಕುಕ್ಕೆ ಸುಬ್ರಹ್ಮಣ್ಯ : ನಾಳೆ(ಜೂ.30) ಆಶ್ಲೇಷ ಮಂದಿರದ ಶಂಕುಸ್ಥಾಪನಾ ಸಮಾರಂಭ

ಶಂಕುಸ್ಥಾಪನೆ ನೆರವೇರಿಸಲಿರುವ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ

(ವರದಿ : ಉಲ್ಲಾಸ್ ಕಜ್ಜೋಡಿ)
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಶ್ಲೇಷ ಮಂದಿರದ ಶಂಕುಸ್ಥಾಪನಾ ಸಮಾರಂಭವು ನಾಳೆ(ಜೂ.30) ಪೂರ್ವಾಹ್ನ 11:30ಕ್ಕೆ ತುಳಸಿ ತೋಟ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಇಲ್ಲಿ ನಡೆಯಲಿದ್ದು, ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ರವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಘನ ಉಪಸ್ಥಿತರಾಗಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ ಖಾದರ್ ಫರೀದ್ ರವರು ಉಪಸ್ಥಿತರಿರಲಿದ್ದು, ಗೌರವ ಉಪಸ್ಥಿತರಾಗಿ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾನ್ಯ ಸಂಸದರು ಹಾಗೂ ರಾಜ್ಯಸಭಾ ಸದಸ್ಯರಾದ ಡಾ| ಡಿ.ವಿರೇಂದ್ರ ಹೆಗ್ಗಡೆ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ| ಭರತ್ ಶೆಟ್ಟಿ.ವೈ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್.ಯು, ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉಮಾನಾಥ್.ಎ ಕೋಟ್ಯಾನ್, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ.ವೇದವ್ಯಾಸ ಕಾಮತ್, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ, ಕರ್ನಾಟಕ ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್ ಬೋಜೇಗೌಡ, ಐವನ್ ಡಿ’ಸೋಜ, ಪ್ರತಾಪ್ ಸಿಂಹ ನಾಯಕ್.ಕೆ, ಮಂಜುನಾಥ್ ಭಂಡಾರಿ, ಡಾ| ಧನಂಜಯ ಸರ್ಜಿ, ಕಿಶೋರ್.ಬಿ.ಆರ್ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತ ಇವರುಗಳು ಉಪಸ್ಥಿತರಿರಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟಾನ್ಲಿ ಅಲ್ವಾರಿಸ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಉಮರ್.ಯು.ಎಚ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ.ಡಿ.ಎಸ್ ಗಟ್ಟಿ, ಕರ್ನಾಟಕ ಗ್ಯಾರೆಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ| ಎಂ.ಪಿ ಶ್ರೀನಾಥ್ ಇವರುಗಳು ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಬಿ.ರಮಾನಾಥ್ ರೈ ರವರು ಉಪಸ್ಥಿತರಿರಲಿದ್ದಾರೆ.
ಆಶ್ಲೇಷ ಮಂದಿರದ ದಾನಿಗಳಾದ ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಮಾಲೂರು ಎಸ್.ಎನ್ ಕೃಷ್ಣಯ್ಯ ಶೆಟ್ಟಿ ರವರು ಉಪಸ್ಥಿತರಿರಲಿದ್ದು, ಗೌರವಾನ್ವಿತ ಅತಿಥಿಗಳಾಗಿ ಬಾ.ಆ.ಸೇ ಸರ್ಕಾರದ ಕಾರ್ಯದರ್ಶಿಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾದ ಡಾ|| ಎಂ.ವಿ ವೆಂಕಟೇಶ್ ಹಾಗೂ ಭಾ.ಆ.ಸೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ದಂಡಾಧಿಕಾರಿಗಳಾದ ದರ್ಶನ್.ಹೆಚ್.ವಿ ರವರು ಉಪಸ್ಥಿತರಿರಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading