Ad Widget

ಅಜ್ಜಾವರ : ಮಕ್ಕಳ ಹಕ್ಕುಗಳ ಅರಿವು ಕಾರ್ಯಕ್ರಮ

ಸರಕಾರಿ ಪ್ರೌಢ ಶಾಲೆ ಅಜ್ಜಾವರದಲ್ಲಿ ಜೂ.30 ರಂದು ಮಕ್ಕಳ ಹಕ್ಕುಗಳ ಅರಿವು ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯ ಶಿಕ್ಷಕರಾದ ಗೋಪಿನಾಥ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ವಿದ್ಯಾ ಶಂಕರಿ ಶಿಕ್ಷಕಿ ರವರು ಎಲ್ಲರನ್ನೂ ಸ್ವಾಗತಿಸಿದರು. ಶ್ರೀಮತಿ ಪ್ರಿಯಾ ರಾಜಮೋಹನ್ ಆಡಳಿತಾಧಿಕಾರಿ ಸಖೀ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ರವರು ಸಂಪನ್ಮೂಲ ವ್ಯಕ್ತಿ ಯಾಗಿ ಭಾಗವಹಿಸಿ ಮಾತನಾಡಿ ಮಕ್ಕಳ ಹಕ್ಕುಗಳು, ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳು, ಪೋಕ್ಸೋ ಕಾಯಿದೆ ಮಕ್ಕಳ ಸಹಾಯವಾಣಿ ಇತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

. . . . . . . . .

ವೇದಿಕೆಯಲ್ಲಿ ಎಸ್ ಡಿಎಂಸಿ ಅಧ್ಯಕ್ಷರಾದ ಪ್ರಕಾಶ್ ಕಣೆಮಾರಡ್ಕ ಉಪಾಧ್ಯಕ್ಷರಾದ ಶೌಕತ್ ಅಲಿ, ಸದಸ್ಯರಾದ ಜನಾರ್ಧನ, ದಾಮೋದರ ಕೆ., ಶಾಲಾ ಮಕ್ಕಳ ಸುರಕ್ಷತಾ ಸಮಿತಿ ಸದಸ್ಯರಾದ ವಸಂತಿ,  ಯಶೋಧ, ಗ್ರಂಥಪಾಲಕಿ ಸಾವಿತ್ರಿ ಕಣೆಮಾರಡ್ಕ ಅತಿಥಿಗಳಾಗಿ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮುಖ್ಯ ಶಿಕ್ಷಕರಾದ ಗೋಪಿನಾಥ್ ರವರು ವಂದಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading