Ad Widget

ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಹಾಗೂ ಇಂಟ್ರಮ್ಯೂರಲ್ 2025-26ಕ್ಕೆ ಅದ್ಧೂರಿಯ ಚಾಲನೆ

ವಿದ್ಯಾರ್ಥಿಗಳಲ್ಲಿ ಚುನಾವಣಾ ಪ್ರಕ್ರಿಯೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾದರಿ ಚುನಾವಣೆ ನಡೆಸಿ ವಿದ್ಯಾರ್ಥಿ ಸಂಸತ್ತಿನ ರಚನೆಯನ್ನು ಮಾಡಲಾಯಿತು.
ವಿದ್ಯಾರ್ಥಿ ಸಂಸತ್ತಿನ ಸಲಹೆಗಾರರಾದ ಶಿಕ್ಷಕಿ ಶ್ರೀಮತಿ ರೂಪಾರವರು ವಿದ್ಯಾರ್ಥಿಗಳಿಗೆ ಚುನಾವಣಾ ಪ್ರಕ್ರಿಯೆಯ ಮಾಹಿತಿಯನ್ನು ನೀಡಿ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
ಜು.01 ರಂದು ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಹಾಗೂ ಇಂಟ್ರಮ್ಯೂರಲ್ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮೊದಲಿಗೆ ಅತಿಥಿಗಳನ್ನು ಮತ್ತು ಶಾಲಾ ಸಂಸತ್ತಿನ ವಿದ್ಯಾರ್ಥಿಗಳನ್ನು ವೇದಿಕೆಗೆ ಆಹ್ವಾನಿಸಲಾಯಿತು.
ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಸೈನಿಕರಾದ ಕೆ.ಪಿ.ಜಗದೀಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷರಾಗಿ ಶಾಲಾ ಸಂಚಾಲಕರಾದ ವಂದನೀಯ ಫಾದರ್ ಪಾವ್ಲ್ ಕ್ರಾಸ್ತಾ ಹಾಗೂ ಶಾಲಾ ಮುಖ್ಯ ಶಿಕ್ಷಕರಾದ ಸಿಸ್ಟರ್ ಅನಿತಾ ಫೆರ್ನಾಂಡಿಸ್ ರವರು ಆಸೀನರಾಗಿದ್ದರು.
ವಿದ್ಯಾರ್ಥಿ ಸಂಸತ್ತನ್ನು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಲಾಯಿತು.
ಇದರೊಂದಿಗೆ ವಿಭಿನ್ನ ರೀತಿಯಲ್ಲಿ ಇಂಟ್ರಾ ಮ್ಯೂರಲ್ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.
ನಂತರ ಸಂಸತ್ತಿನ ಚುನಾಯಿತ ಮಂತ್ರಿಗಳಿಗೆ ಪದವಿ ಪಟ್ಟಿಯನ್ನು ಹಸ್ತಾಂತರಿಸಲಾಯಿತು.
ಮುಖ್ಯೋಪಾಧ್ಯಾಯರಾದ ಸಿಸ್ಟರ್ ಅನಿತಾ ಫೆರ್ನಾಂಡಿಸ್ ಪ್ರತಿಜ್ಞಾವಿಧಿಯನ್ನು  ನಡೆಸಿಕೊಟ್ಟರು.
ನಂತರ ಗುಂಪುಗಳ ಪ್ರತಿನಿಧಿಗಳಿಗೆ ಗುಂಪುಗಳ ಬಾವುಟವನ್ನು ನೀಡಲಾಯಿತು. ಸಾಂಸ್ಕೃತಿಕ ಮಂತ್ರಿಯಾದ ವಿದ್ಯಾರ್ಥಿನಿ ಝಕೀಯ ಗುಂಪುಗಳ ಪ್ರತಿನಿಧಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕೆ.ಪಿ ಜಗದೀಶ್ ರವರು ವಿದ್ಯಾರ್ಥಿ ಸಂಸತ್ತಿನಲ್ಲಿ ವಿದ್ಯಾರ್ಥಿಗಳ ಪಾತ್ರ ಹಾಗೂ ಶಿಸ್ತಿನ ಬಗ್ಗೆ ತಿಳಿಸಿದರು.
ಅಧ್ಯಕ್ಷ ನೆಲೆಯಲ್ಲಿ ಮಾತನಾಡಿದ ಶಾಲಾ ಸಂಚಾಲಕರು ಶಾಲಾ ಸಂಸತ್ತಿನ ನಾಯಕರಿಗೆ ಹಾಗೂ  ಮಂತ್ರಿಗಳಿಗೆ ಶುಭ ಹಾರೈಸಿದರು.
ಕುಮಾರಿ ತೃಷಾ ರವರು ಸ್ವಾಗತಿಸಿ ಕುಮಾರಿ ಜೀವಿತರವರು ವಂದನಾರ್ಪಣೆಗೈದರು.
ವಿದ್ಯಾರ್ಥಿನಿ ಎಮಿಲಿ ಫೈತ್ ಹಾಗೂ  ಎಮ ಗ್ರೆಸ್ ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಯಕ್ರಮದ ನಿರ್ವಹಣಾ ಜವಾಬ್ದಾರಿಯನ್ನು ಸಹ ಶಿಕ್ಷಕರಾದ ವನಿತಾ.ಬಿ, ರೇವತಿ.ಎಂ, ವಾಣಿಶ್ರೀ ಹಾಗೂ ರೂಪಾರವರು ವಹಿಸಿದ್ದರು.
ಈ ಸಂದರ್ಭದಲ್ಲಿ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading