Ad Widget

“ಸ್ವಚ್ಛತೆಗೆ ಹೆಚ್ಚಿನ ಆಧ್ಯತೆ ನೀಡಬೇಕು” : ಕು| ಭಾಗೀರಥಿ ಮುರುಳ್ಯ

ಪಂಜ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶೌಚಾಲಯ ಉದ್ಘಾಟನೆ

“ನಮ್ಮ ದೇಶದಲ್ಲಿ ಸ್ವಚ್ಛತೆಗೆ ಹೆಚ್ಚಿನ ಮಹತ್ವ ಹಾಗೂ ಆದ್ಯತೆಯನ್ನು ನೀಡುತ್ತಾ ಬಂದಿದ್ದೇವೆ. ಎಲ್ಲಿ ಸ್ವಚ್ಛತೆ ಇರುತ್ತದೆಯೋ ಅಲ್ಲಿ ಉತ್ತಮ ಆರೋಗ್ಯ ಇರುತ್ತದೆ. ಕೇಂದ್ರ ಸರ್ಕಾರವು ಸ್ವಚ್ಛ ಭಾರತ ಯೋಜನೆಯಡಿ ಪ್ರತೀ ಮನೆಗಳಿಗೂ ಕಡ್ಡಾಯವಾಗಿ ಶೌಚಾಲಯವನ್ನು ನಿರ್ಮಿಸಲು ಮುಂದಾಗಿದೆ. ಇದರ ಉದ್ದೇಶ ಮನೆಮಂದಿ ಎಲ್ಲೂ ಬಯಲು ಶೌಚಾಲಯಕ್ಕೆ ಹೋಗದೇ ಮನೆಯಲ್ಲಿರುವ ಶೌಚಾಲಯವನ್ನು ಉಪಯೋಗಿಸಿ ಸ್ವಚ್ಛತೆಯೊಂದಿಗೆ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬೇಕು ಎಂಬುದಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಕೂಡ ಸ್ವಚ್ಛತೆಗೆ ಹೆಚ್ಚಿನ ಆಧ್ಯತೆ ನೀಡಬೇಕು” ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಹೇಳಿದರು. ಅವರು ಜು.02 ರಂದು ಪಂಜ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳೂರಿನ ಎಂ.ಆರ್.ಪಿ.ಎಲ್ ಸಂಸ್ಥೆಯವರು ಪಿ.ಎಸ್.ಆರ್ ಯೋಜನೆಯ ಅಡಿಯಲ್ಲಿ ರೂ.20 ಲಕ್ಷ ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಬಾಲಕ ಹಾಗೂ ಬಾಲಕಿಯರ ಪ್ರತ್ಯೇಕ ಶೌಚಾಲಯಗಳನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ಸಮಾರಂಭ ಅಧ್ಯಕ್ಷತೆಯನ್ನು ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯಲಕ್ಷ್ಮಿ ವಹಿಸಿದ್ದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನಾರಾಯಣ ಕೃಷ್ಣನಗರ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಲಿಗೋಧರ ಆಚಾರ್ಯ, ಉಪಾಧ್ಯಕ್ಷರಾದ ಸೌಮ್ಯಶ್ರೀ, ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಶೇಖರ ದೇರಾಜೆ, ಲಿಖಿತ್ ಪಲ್ಲೋಡಿ, ಎಂ.ಆರ್.ಪಿ.ಎಲ್ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಹಾಗೂ ಶಾಲಾ ಮುಖ್ಯ ಶಿಕ್ಷಕರಾದ ಲೀಲಾ ಕುಮಾರಿ.ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶೌಚಾಲಯವನ್ನು ನಿರ್ಮಿಸಿದ ಶಬೀರ್ ಬಾಳಿಲ ಹಾಗೂ ಎಂ.ಆರ್.ಪಿ.ಎಲ್ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಶಾಲಾ ವಿದ್ಯಾರ್ಥಿಗಳು, ಪೋಷಕರು, ಊರಿನವರು ಹಾಗೂ ಶಿಕ್ಷಕವೃಂದದವರು ಉಪಸ್ಥಿತರಿದ್ದರು.
ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರಾದ ಸೋಮಶೇಖರ್ ನೇರಳ ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಾಲಾ ಮುಖ್ಯ ಶಿಕ್ಷಕರಾದ ಲೀಲಾ ಕುಮಾರಿ.ಟಿ ಸ್ವಾಗತಿಸಿದರು.
ಜೆ.ಸಿ.ಐ ಪೂರ್ವಾದ್ಯಕ್ಷರಾದ ತೀರ್ಥಾನಂದ ಕೊಡಂಕಿರಿ ಕಾರ್ಯಕ್ರಮ ನಿರೂಪಿಸಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಲಿಗೋಧರ ಆಚಾರ್ಯ ಧನ್ಯವಾದ ಸಮರ್ಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading