Ad Widget

ಸುಳ್ಯದಲ್ಲಿ ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆ – ಸಹಕಾರಿ ರತ್ನ ನಿತ್ಯಾನಂದ ಮುಂಡೋಡಿಯವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ

ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು, ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ, ಮಹಿಳಾ ಘಟಕ, ತರುಣ ಘಟಕ ಮತ್ತು ಗ್ರಾಮ ಸಮಿತಿಗಳ ನೇತೃತ್ವದಲ್ಲಿ ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆ ಹಾಗೂ ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.

. . . . . . . . .

ರಾಜಕೀಯ, ಸಾಮಾಜಿಕ, ಸಹಕಾರಿ, ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಹಿರಿಯ ಸಹಕಾರಿ, ಸಹಕಾರಿ ರತ್ನ ನಿತ್ಯಾನಂದ ಮುಂಡೋಡಿಯವರಿಗೆ ಕೆಂಪೇಗೌಡ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಸಮಾರಂಭವನ್ನು ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ. ವಿ. ಮಾತನಾಡಿದರು.

. . . . . . .

ಪಿ. ಸಿ. ಜಯರಾಮ್ ಅಭಿನಂದನಾ ಭಾಷಣ ಮಾಡಿದರು. ತಾಲೂಕು ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಹಕಾರಿ ಜಾಕೆ ಮಾಧವ ಗೌಡ ಗೌರವ ಅತಿಥಿಗಳಾಗಿದ್ದರು. ಅತಿಥಿಗಳಾಗಿ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಸಿ.ಸದಾನಂದ, ಮಹಾತ್ಮಾಗಾಂಧಿ ಮಲ್ನಾಡು ವಿದ್ಯಾ ಸಂಸ್ಥೆಗಳ ಸಂಚಾಲಕ ದೊಡ್ಡಣ್ಣ ಬರೆಮೇಲು, ಗೌಡರ ಯುವ ಸೇವಾ ಸಂಘಧ ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು, ತರುಣ ಘಟಕದ ಅಧ್ಯಕ್ಷ ಪ್ರೀತಮ್ ಡಿ.ಕೆ, ಗೌಡರ ಯುವ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ತೀರ್ಥರಾಮ ಅಡ್ಕಬಳೆ, ಕೋಶಾಧಿಕಾರಿ ದಿನೇಶ್ ಮಡ್ತಿಲ, ಮಹಿಳಾ ಘಟಕದ ಕಾರ್ಯದರ್ಶಿ ಸವಿತಾ ಸಂದೇಶ್, ಕೋಶಾಧಿಕಾರಿ ಜಯಶ್ರೀ ಪಲ್ಲತ್ತಡ್ಕ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ದಿನೇಶ್ ಮಡಪ್ಪಾಡಿ ಸ್ವಾಗತಿಸಿ, ಭವಾನಿಶಂಕರ ಅಡ್ತಲೆ ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading