Ad Widget

ಸುಬ್ರಹ್ಮಣ್ಯ ರೋಟರಿ ಕ್ಲಬ್ ಪೂರ್ವಾಧ್ಯಕ್ಷರಾದ ವಿಶ್ವನಾಥ ನಡುತೋಟ ಅವರಿಗೆ ಪಿ.ಹೆಚ್.ಎಫ್ ಪದವಿ

ಅಂತಾರಾಷ್ಟ್ರೀಯ ರೋಟರಿ ಕ್ಲಬ್ ನ ಸ್ಥಾಪಕರಾದ ಪೌಲ್ ಹ್ಯಾರೀಸ್ ರವರ ನೆನಪಿನಲ್ಲಿ ನೀಡುವಂತಹ ಅತ್ಯುನ್ನತ ಪದವಿ ಪಿ.ಹೆಚ್.ಎಫ್ ಪದವಿಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷರಾದ ಹಾಗೂ ಜೋನಲ್ ಲೆಫ್ಟಿನೆಂಟ್ ಆದ ವಿಶ್ವನಾಥ ನಡುತೋಟ ರವರಿಗೆ ನೀಡಲಾಗಿದೆ. ಇವರು ರೋಟರಿ ಸಂಸ್ಥೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ವಿಶ್ವನಾಥ ನಡುತೋಟ ಅವರು ಜೆ.ಸಿ.ಐ ಸುಬ್ರಹ್ಮಣ್ಯ ಕುಕ್ಕೆಶ್ರೀ ಇದರ ಸ್ಥಾಪಕಾಧ್ಯಕ್ಷರಾಗಿ, ಸೀನಿಯರ್ ಚೇಂಬರ್ ನ ಸ್ಥಾಪಕಾಧ್ಯಕ್ಷರಾಗಿ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ನ ಸ್ಥಾಪಕಾಧ್ಯಕ್ಷರಾಗಿ ಹೀಗೆ ಹಲವಾರು ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸೇವೆಯನ್ನು ಸಲ್ಲಿಸುತ್ತಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading