Ad Widget

ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

ಸುಬ್ರಾಯ ಸಂಪಾಜೆಯವರಿಗೆ ಸನ್ಮಾನ

“ಪತ್ರಕರ್ತರು ವೃತ್ತಿಯಲ್ಲಿ ಅಭಿವೃದ್ಧಿಯ ಸಿದ್ಧಾಂತದೊಂದಿಗೆ ಮುನ್ನಡೆಯಬೇಕು” – ಆರ್.ಸಿ ಭಟ್

“ಪತ್ರಕರ್ತರು ವೃತ್ತಿಯಲ್ಲಿ ಅಭಿವೃದ್ಧಿಯ ಸಿದ್ಧಾಂತದೊಂದಿಗೆ ಮುನ್ನಡೆಯಬೇಕು” ಎಂದು ವಿಜಯ ಕರ್ನಾಟಕ ದೈನಿಕದ ಹಿರಿಯ ಉಪ ಸಂಪಾದಕರಾದ ಆರ್.ಸಿ ಭಟ್ ಹೇಳಿದರು.
ಅವರು ಸುಳ್ಯದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಉಪನ್ಯಾಸ ನೀಡಿದರು. “ಹೆಚ್ಚಿನ ಜ್ಞಾನ ಪಡೆಯಲು ಪತ್ರಿಕೆಗಳು ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳಿಗೆ ಪುಸ್ತಕದ ಚೌಕಟ್ಟು ಮೀರಿ ಪತ್ರಿಕೆಗಳಿಂದ ಜ್ಞಾನ ಪಡೆಯಬಹುದು. ಪತ್ರಕರ್ತರು ವೃತ್ತಿಯಲ್ಲಿ ಅಭಿವೃದ್ಧಿಯ ಸಿದ್ಧಾಂತದೊಂದಿಗೆ ಮುನ್ನಡೆಯಬೇಕು. ಜವಾಬ್ದಾರಿ ಅರಿತು ವರದಿ ಮಾಡಬೇಕು. ಅಭಿವೃದ್ಧಿ ವಿಷಯ, ಜನಪರ ನಿಲುವುಗಳನ್ನಿಟ್ಟು ಕಾರ್ಯನಿರ್ವಹಿಸಬೇಕಿದೆ. ತಾಲೂಕಿನ ಸಮಸ್ಯೆಗಳಿಗೆ ಪತ್ರಕರ್ತರು ಧ್ವನಿಯಾಗಬೇಕಿದೆ. ಅಭಿವೃದ್ಧಿ ಕೆಲಸಗಳ ಬಗ್ಗೆ ಪತ್ರಕರ್ತರು ಫಾಲೋ ಅಪ್ ಮಾಡಿದರೇ ಖಂಡಿತ ಅಭಿವೃದ್ಧಿ ಸಾಧ್ಯವಿದೆ” ಎಂದರು.‌
ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ “ಪತ್ರಕರ್ತರು ವಸ್ತುನಿಷ್ಠ ವರದಿ ಮಾಡಬೇಕು ಎಂದರು. ಸಂಘದ ಅಧ್ಯಕ್ಷರಾದ ಲೋಕೇಶ್ ಪೆರ್ಲಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಆಕಾಶವಾಣಿ ಮಡಿಕೇರಿ ಕೇಂದ್ರದ ನಿವೃತ್ತ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಅವರನ್ನು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸನ್ಮಾನಿಸಿದರು.
ವಿದ್ಯಾರ್ಥಿಗಳಿಗೆ ನಡೆಸಿದ ಸ್ಪರ್ಧಾ ಕಾರ್ಯಕ್ರಮದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷರಾದ ಶರೀಫ್ ಜಟ್ಟಿಪ್ಪಳ್ಳ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ,  ಗೌರವಾಧ್ಯಕ್ಷರಾದ ದಯಾನಂದ ಕಲ್ನಾರ್ ಉಪಸ್ಥಿತರಿದ್ದರು.‌
ಜಿಲ್ಲಾ ಸಂಘದ ಕಾರ್ಯದರ್ಶಿ ಗಂಗಾಧರ ಕಲ್ಲಪ್ಪಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.
ಪತ್ರಕರ್ತ ಮಿಥುನ್ ಕರ್ಲಪ್ಪಾಡಿ ವಂದಿಸಿದರು.
ಪತ್ರಕರ್ತರಾದ ಪೂಜಾಶ್ರೀ ಕಾರ್ಯಕ್ರಮ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading