Ad Widget

ವಳಲಂಬೆ : ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ವತಿಯಿಂದ ಪರಿಸರ ಜಾಗೃತಿ ಕಾಯ೯ಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಇದರ ವತಿಯಿಂದ ಪರಿಸರ ಜಾಗೃತಿ ಕಾಯ೯ಕ್ರಮ ಅಂಗವಾಗಿ ಸ. ಹಿ ಪ್ರಾ ಶಾಲೆ ವಳಲಂಬೆ ಇಲ್ಲಿ ಪರಿಸರ ಜಾಗೃತಿಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಾಲೆಯ ಎಲ್ಲಾ ತರಗತಿವಾರು ವಿದ್ಯಾರ್ಥಿಗಳಿಗೆ ಪರಿಸರಕ್ಕೆ ಸಂಬಂಧಪಟ್ಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಿದರು.‌
ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಿತ್ರ ಮೂಕಮಲೆಯವರು ಹಣ್ಣಿನ ಗಿಡ ನೆಡುವುದರ ಮೂಲಕ ಶಾಲಾ ಆವರಣದಲ್ಲಿ ಗಿಡ ನೆಡುವುದಕ್ಕೆ ಚಾಲನೆ ನೀಡಿದರು.
ಪರಿಸರ ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಕೃಷಿ ಅಧಿಕಾರಿಯವರಾದ ರಮೇಶ್ ರವರು ಮಾತನಾಡಿ ಮಹತ್ವ ಮಕ್ಕಳಲ್ಲಿ ಸ್ವಚ್ಛತೆ ಮತ್ತು ಸಂಸ್ಕಾರವನ್ನು ಕಲಿಸುವಂತಹ ಗುರಿ ನಮ್ಮಲ್ಲಿ ಬೇಕು ಎಂದು ತಿಳಿಸಿದರು.

. . . . . . . . .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಳಲಂಬೆ ಒಕ್ಕೂಟದ ಮಾಜಿ ಅಧ್ಯಕ್ಷ ವಿಶ್ವನಾಥ ಹೊಸೋಳಿಕೆ ವಹಿಸಿದ್ದರು. ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮೂಕಮಲೆ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಶಾಲೆಯಲ್ಲಿ ಮಕ್ಕಳಿಗೆ ಪರಿಸರಕ್ಕೆ ಸಂಬಂಧಪಟ್ಟ ಮಾಹಿತಿಗಳನ್ನು ನೀಡುವುದರ ಜೊತೆಗೆ ನಮ್ಮ ಪರಿಸರ ಸ್ವಚ್ಛ ಪರಿಸರ ವಾಗಿ ಉಳಿಸಿ ಬೆಳೆಸುವ, ಮನೆಯಲ್ಲಿಯೂ ಒಂದು ಗಿಡ ನೆಟ್ಟು ಅದನ್ನು ಪೋಷಿಸುವ ಎಂದು ಶುಭ ಹಾರೈಸಿದರು.

. . . . . . .


ವೇದಿಕೆಯಲ್ಲಿ ಅತಿಥಿಗಳಾಗಿ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಕಲಾವತಿ ಮೊಟ್ಟೆ ಮನೆ, ಶಾಲಾ SDMC ಉಪಾಧ್ಯಕ್ಷರಾದ ಶ್ರೀಮತಿ ನಳಿನಾಕ್ಷಿ, ಶಾಲಾ ಮುಖ್ಯ ಗುರುಗಳಾದ ಕು| ತೃಪ್ತಿ,, ಒಕ್ಕೂಟದ ಕಾರ್ಯದರ್ಶಿಯಾದ ಪಿ ಎಸ್ ಜಗದೀಶ ಪೈಕ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ಲೋಕೇಶ್ವರ ಡಿ.ಆರ್., ಸೇವಾಪ್ರತಿನಿಧಿಯಾದ ಶ್ರೀಮತಿ ಲೋಕೇಶ್ವರಿ, ಶಾಲಾ ಪೋಷಕರು, ಶಿಕ್ಷಕ ವೃಂದ ಹಾಗೂ ಪ್ರಗತಿಬಂಧು ಮತ್ತು ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading