Ad Widget

ಹರಿಹರ ಪಳ್ಳತ್ತಡ್ಕ : ನಾಳೆ(ಜು.26) ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ರವರಿಗೆ ಬೀಳ್ಕೊಡುವ ಸಮಾರಂಭ

ಸಂಘದ ನಿವೃತ್ತ ಸಿಬ್ಬಂದಿಗಳಿಗೆ ಸಾರ್ವಜನಿಕ ಸನ್ಮಾನ ಸಮಾರಂಭ

(ವರದಿ : ಉಲ್ಲಾಸ್ ಕಜ್ಜೋಡಿ) ಕಳೆದ 40 ವರ್ಷಗಳಿಂದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಇತ್ತೀಚೆಗೆ ನಿವೃತ್ತರಾದ ಅನಂತರಾಮ ಮಣಿಯಾನಮನೆ ರವರಿಗೆ ಬೀಳ್ಕೊಡುವ ಸಮಾರಂಭ ಹಾಗೂ ಸಂಘದ 2024-25ನೇ ಸಾಲಿನ ನಿವೃತ್ತ ಸಿಬ್ಬಂದಿಗಳಿಗೆ ಸಾರ್ವಜನಿಕ ಸನ್ಮಾನ ಸಮಾರಂಭವು ನಾಳೆ(ಜು.26) ಪೂರ್ವಾಹ್ನ 10:30ಕ್ಕೆ ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಲಿದ್ದು, ನಿವೃತ್ತ ಮುಖ್ಯೋಪಾಧ್ಯಾಯರಾದ ಶಿವರಾಮ ಕುಂಞೇಟಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಹಿರಿಯ ವೈದ್ಯರು ಹಾಗೂ ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ಡಾ| ಚಂದ್ರಶೇಖರ ಕಿರಿಭಾಗ ರವರು ಸನ್ಮಾನ ಸಮಾರಂಭವನ್ನು ನೆರವೇರಿಸಲಿದ್ದು, ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಡಾ. ಸೋಮಶೇಖರ್ ಕಟ್ಟೆಮನೆ ರವರು ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಲಿದ್ದಾರೆ.
ನಿವೃತ್ತ ಪ್ರಾಂಶುಪಾಲರಾದ ಪ್ರಭಾಕರ ಕಿರಿಭಾಗ, ಕಟ್ಟ ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ಕೆ.ಜಿ ಶಂಭಯ್ಯ ಪನ್ನೆ, ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಧಾನ ಕಛೇರಿಯ ಸ್ಥಳಧಾನಿಗಳಾದ ಶ್ರೀಮತಿ ಭವಾನಿ ಶಿವರಾಮ ಗೌಡ ಮುಂಡಾಜೆ, ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಡಿ.ಎಸ್ ಹರ್ಷಕುಮಾರ್ ದೇವಜನ, ವೈದ್ಯರಾದ ಡಾ| ಗಿರೀಶ್.ಕೆ.ಜಿ ಉರಿಮಜಲು, ಕೆ.ವಿ.ಜಿ ಆಯುರ್ವೇದ ಫಾರ್ಮ ರಿಸರ್ಚ್ ಸೆಂಟರ್ ನ ಸಿ.ಇ.ಓ ಹಾಗೂ ಸುಳ್ಯ ರೋಟರಿ ವಿದ್ಯಾಸಂಸ್ಥೆಗಳ ಟ್ರಸ್ಟಿ ಡಾ. ಪುರುಷೋತ್ತಮ ಕಟ್ಟೆಮನೆ, ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ್ ಕುಮಾರ್ ಅಂಙಣ, ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೋಹಿನಿ ಕಟ್ಟ, ಹರಿಹರ ಪಳ್ಳತ್ತಡ್ಕ ಸರಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ರಾಮಚಂದ್ರ ಕಜ್ಜೋಡಿ, ಪ್ರಶಸ್ತಿ ವಿಜೇತ ಪ್ರಗತಿಪರ ಕೃಷಿಕರಾದ ಸತೀಶ್ ಕುಮಾರ್.ಕೆ.ಜಿ ಕೊಪ್ಪಡ್ಕ, ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ವಿನೂಪ್ ಮಲ್ಲಾರ, ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರು ಹಾಗೂ ಪ್ರಗತಿಪರ ಕೃಷಿಕರಾದ ಚಂದ್ರಹಾಸ ಶಿವಾಲ, ಸುಳ್ಯ ಕೆ.ವಿ.ಜಿ ಪವರ್ ಹೌಸ್ ನ ಕಾರ್ಯನಿರ್ವಹಣಾಧಿಕಾರಿಗಳಾದ ವಸಂತ ಕಿರಿಭಾಗ, ಸಹಕಾರಿ ಸಂಘಗಳ ಗುತ್ತಿಗಾರು ವಲಯ ಮೇಲ್ವಿಚಾರಕರಾದ ಮನೋಜ್ ಕುಮಾರ್.ಯಂ.ಪಿ ಹಾಗೂ ನಿವೃತ್ತ ಸಬ್ ಇನ್ಸ್ಪೆಕ್ಟರ್ ಸುಬ್ಬಣ್ಣ ಗೌಡ ಮಣಿಯಾನಮನೆ ಇವರುಗಳು ಅಭಿನಂದನಾ ಭಾಷಣ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading