Ad Widget

ಅರಂತೋಡು : ಸಂಜೀವಿನಿ ಮಾಸಿಕ ಸಂತೆ

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲ್ಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಅರಂತೋಡು ಮತ್ತು ದುರ್ಗಾಮಾತಾ ಸಂಜೀವಿನಿ ಒಕ್ಕೂಟ ಅರಂತೋಡು ಇವುಗಳ ಸಂಯುಕ್ತ ಆಶ್ರಯದಲ್ಲಿ ಅರಂತೋಡು ಗ್ರಾಮ ಪಂಚಾಯತ್ ವಠಾರದಲ್ಲಿ  ಸಂಜೀವಿನಿ ಮಾಸಿಕ ಸಂತೆ ನಡೆಯಿತು.
ಸಭಾ ಕಾರ್ಯಕ್ರಮವನ್ನು ಸುಳ್ಯ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ, ಗ್ರಾಮ ಪಂಚಾಯತ್ ಪಿಡಿಒ ಜಯಪ್ರಕಾಶ್, ತಾಲೂಕು ಎನ್
ಆರ್.ಎಲ್.ಎಂ ಶ್ವೇತಾ, ನಿವೃತ ಶಿಕ್ಷಕರಾದ ತಿರ್ಥರಾಮ ಆಡ್ಕಬಳೆ, ಪ್ರಮೀಳಾ ಉಳುವಾರು, ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರು ಭಾಗವಹಿಸಿದ್ದರು.
ಸಂತೆಯಲ್ಲಿ ಸಂಜೀವಿನಿ ಸ್ವ-ಸಹಾಯ ಸಂಘಗಳ ಸದಸ್ಯರು ತಯಾರಿಸಿದ ದಿನಬಳಕೆ ಗೃಹೋಪಯೋಗಿ ಪಾರಂಪರಿಕ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು.
ಸುಳ್ಯ ತಾಲೂಕಿನ ಎನ್.ಆರ್.ಎಲ್.ಎಂ ಸಿಬ್ಬಂದಿ ಗಳು, ಎಂ.ಬಿ.ಕೆ, ಎಲ್.ಸಿ.ಆರ್.ಪಿ, ಸಖಿಗಳು, ತಾಲೂಕು ಪಂಚಾಯತ್ ಎನ್.ಆರ್.ಎಲ್.ಎಮ್ ಸಿಬ್ಬಂದಿಗಳು, ತಾಲೂಕು ಗ್ರಾಮ ಒಕ್ಕೂಟದ ಸಿಬ್ಬಂದಿಗಳು, ಸಂಜೀವಿನಿ ಸದಸ್ಯರು ಹಾಜರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading