2020ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್ ಸಿ ಪರೀಕ್ಷಾ ಫಲಿತಾಂಶವು ಇಂದು (ಆ. 10) ಮಧ್ಯಾಹ್ನ 3 ಗಂಟೆ ನಂತರ ಪ್ರಕಟಗೊಳ್ಳಲಿದೆ ಎಂದು ತಿಳಿದುಬಂದಿದೆ.
ಮಧ್ಯಾಹ್ನ 3 ಗಂಟೆಯ ನಂತರ ಸರ್ಕಾರ ಅಧಿಕೃತ ವೆಬ್ ಸೈಟ್ ಗಳಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆಯುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆದ ಪ್ರತಿಯೊಬ್ಬ ವಿದ್ಯಾರ್ಥಿಯ ನೊಂದಾಯಿತ ಮೊಬೈಲ್ ಸಂಖ್ಯೆಗೆ ಫಲಿತಾಂಶವನ್ನು ಎಸ್‌ಎಂಎಸ್ ಮೂಲಕ ರವಾನಿಸಲಾಗುತ್ತದೆ ಇಲಾಖೆ ತಿಳಿಸಿದೆ. ರಾಜ್ಯಾದ್ಯಂತ ಒಟ್ಟು 7.5 ಲಕ್ಷ ವಿದ್ಯಾರ್ಥಿಗಳ ಫಲಿತಾಂಶ ಲಭ್ಯ ವಾಗಲಿದೆ.
ವೆಬ್ಸೈಟ್ ನಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ