Ad Widget

ಸುಬ್ರಹ್ಮಣ್ಯ : ಆ.30 ಹಾಗೂ 31 ರಂದು “ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ” ಶಿಬಿರ

(ವರದಿ : ಉಲ್ಲಾಸ್ ಕಜ್ಜೋಡಿ)
ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠ ಇದರ ನೇತೃತ್ವದಲ್ಲಿ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್(ರಿ.) ಕಡಬ ತಾಲೂಕು, ರೋಟರಿ ಕ್ಲಬ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸೆಂಟ್ರಲ್ ಮಂಗಳೂರು ಹಾಗೂ ಟೀಂ ಈಶ್ವರ್ ಮಲ್ಪೆ ಇವರುಗಳ ಸಹಯೋಗದೊಂದಿಗೆ ಆ.30 ಹಾಗೂ 31 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಮಠದ ಆವರಣದಲ್ಲಿ “ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ” ಶಿಬಿರ ನಡೆಯಲಿದೆ.
ನೋಂದಣಿ ಕಡ್ಡಾಯವಾಗಿದ್ದು, ಕರೆಮಾಡಿ ನೋಂದಾಯಿಸಿಕೊಳ್ಳತಕ್ಕದ್ದು.
ಹಿರಿಯರಿಗೆ ಮೊದಲ ಆದ್ಯತೆ.
ಶ್ರವಣ ಪರೀಕ್ಷೆಯ ಯಾವುದಾದರೂ ಹಳೆಯ ರಿಪೋರ್ಟ್ ಇದ್ದರೆ ಜೊತೆಯಲ್ಲಿ ತರತಕ್ಕದ್ದು.
ಮೊದಲು ನೋಂದಾಯಿಸುವ 40 ಜನರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.
ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ಅನುಭವ ಪಡೆದಿರುವ ವೈದ್ಯರು ಈ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈಶ್ವರ್ ಮಲ್ಪೆ ತಂಡದವರು ದೇಣಿಗೆ ಮೊತ್ತದಿಂದ 40% ಶ್ರವಣ ಸಾಧನದ ಮೊತ್ತವನ್ನು ಪಾವತಿಸುತ್ತಾರೆ.
ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು ಎಂದು ಶಿಬಿರದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದು, ಹೆಚ್ಚಿನ ಮಾಹಿತಿಗಾಗಿ 9902344399 ಸಂಪರ್ಕಿಸಬಹುದಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading