Ad Widget

ಸುಳ್ಯ : ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ 79ನೆಯ ಸ್ವಾತಂತ್ರ್ಯ ದಿನಾಚರಣೆ

ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯರಿಂದ ಧ್ವಜಾರೋಹಣ

ಶ್ರೀ ಶಾರದಾ ಪದವಿಪೂರ್ವ ಕಾಲೇಜು ಸುಳ್ಯ ಇಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯು ಅತ್ಯಂತ ವಿಜ್ರಂಭಣೆಯಿಂದ ನಡೆಯಿತು.
ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ರವರು ಧ್ವಜಾರೋಹಣವನ್ನು ನೆರವೇರಿಸಿದರು.
ನಂತರ ನಡೆದ ಸಮಾರಂಭದಲ್ಲಿ ಧನಂಜಯ ಅಡ್ಪಂಗಾಯ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಸ್ವಾತಂತ್ರಕ್ಕೋಸ್ಕರ ಹೋರಾಡಿದ ನಾಯಕರುಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ “ವಿದ್ಯಾರ್ಥಿಗಳು ಮುಂದೆ ಬಲಿಷ್ಠ ನಾಯಕರುಗಳಾಗಿ ದೇಶವನ್ನು ಸದೃಢ ಗೊಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಬೇಕೆಂದು”  ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ದಯಮಣಿ.ಕೆ ಸ್ವಾಗತಿಸಿ, ಮುಖ್ಯೋಪಾಧ್ಯಾಯನಿ ಶ್ರೀಮತಿ ಭಾರತಿ.ಪಿ ರವರು ವಂದಿಸಿದರು.
ಸಂಸ್ಥೆಯ ಎಲ್ಲಾ ಬೋಧಕ, ಬೋಧಕೇತರ, ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading