Ad Widget

ವಿದ್ಯಾ ಬೋಧಿನೀ ವಿದ್ಯಾಸಂಸ್ಥೆಗಳು ಬಾಳಿಲ : 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಸಭಾ ಕಾರ್ಯಕ್ರಮವು ವಿದ್ಯಾಬೋಧಿನೀ ಎಜುಕೇಶನ್ ಸೊಸೈಟಿ (ರಿ) ಬಾಳಿಲ ಇದರ ಅಧ್ಯಕ್ಷರಾದ ರಾಧಾಕೃಷ್ಣ ರಾವ್ .ಯು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ವೇದಿಕೆಯಲ್ಲಿ ವಿಶೇಷ ಆಹ್ವಾನಿತರಾಗಿ ಶ್ರೀ ಚಿದಾನಂದ ಗೌಡ ಬಾಳಿಲ, ಹಿರಿಯ ವಿದ್ಯಾರ್ಥಿ, ನಿವೃತ್ತ ಪ್ರಾಂಶುಪಾಲರು, ಕೆವಿಜಿ ಐಟಿಐ ಸುಳ್ಯ ಭಾಗವಹಿಸಿದ್ದು, “ವಿದ್ಯಾರ್ಥಿಗಳು ದೇಶ ಪ್ರೇಮ ಬೆಳಸಿಕೊಳ್ಳಕೊಳ್ಳಬೇಕು. ನಮ್ಮ ಕೆಲಸವನ್ನು ಉತ್ತಮವಾಗಿ ಮಾಡುವುದು ಕೂಡಾ ದೇಶಸೇವೆ” ಎನ್ನುತ್ತಾ ಸ್ವಾತಂತ್ಯ ಹೋರಾಟಗಾರರ, ಯೋಧರ ತ್ಯಾಗ ಬಲಿದಾನವನ್ನು ನೆನೆಪಿಸಿಕೊಂಡರು. ಅಮರ ಸುಳ್ಯ ಬಂಡಾಯದ ಬಗ್ಗೆಯೂ ವಿವರಣೆ ನೀಡಿದರು.

. . . . . . . . .

ವೇದಿಕೆಯಲ್ಲಿ
ಶಾಲಾ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್, ಪ್ರಾಥಮಿಕ ಶಾಲಾ ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸೀತಾರಾಮ ಕಾಯಾರ, ಪ್ರೌಢಶಾಲಾ ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷೆ ಹರಿಣಾಕ್ಷಿ ಬರೆಮೇಲು, ಪ್ರೌಢ ಶಾಲಾ ವಿಭಾಗದ ಪಿ ಟಿ ಎ ಅಧ್ಯಕ್ಷರಾದ ರಾಮಚಂದ್ರ ಕೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ತಾಲೂಕು ಮಟ್ಟದ ಕರಾಟೆ ಮತ್ತು ಚದುರಂಗ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕೆನರಾ ಬ್ಯಾಂಕ್, ಬೆಳ್ಳಾರೆ ಶಾಖೆ ವತಿಯಿಂದ ನೀಡಲ್ಪಡುವ ಪರಿಶಿಷ್ಟ ಪಂಗಡ / ಜಾತಿಯ
ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

. . . . . . .

ಮುಖ್ಯ ಶಿಕ್ಷಕರಾದ ಉದಯಕುಮಾರ್ ರೈ.ಎಸ್ ಸ್ವಾಗತಿಸಿ, ಸಹಶಿಕ್ಷಕಿ ಸಹನಾ ಬಿ.ಬಿ. ವಂದಿಸಿದ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಮನಸ್ವಿ ಎನ್ ಮತ್ತು ಪ್ರದೀಪ್.ಕೆ, 10ನೇ ತರಗತಿ ಇವರು ನಿರ್ವವಹಿಸಿದರು.

ಬೆಳಗ್ಗೆ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ಪ್ರತ್ಯೇಕವಾಗಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್ ಧ್ವಜಾರೋಹಣಗೈದು, ಧ್ವಜ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಮತ್ತು ಪಿ ಟಿ ಎ ಪದಾಧಿಕಾರಿಗಳು, ಪೋಷಕರು,ಬಾಳಿಲ ಅಂಗನವಾಡಿಯ ಸಿಬ್ಬಂದಿ ವರ್ಗದವರು,ಪುಟಾಣಿ ಮಕ್ಕಳು, ಶಾಲಾ ಶಿಕ್ಷಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading