Ad Widget

ದ.ಕ.ಜಿ.ಪಂ ಕಿ.ಪ್ರಾ ಶಾಲೆ ಮೆಟ್ಟಿನಡ್ಕದಲ್ಲಿ 79ನೇ ಸ್ವಾತಂತ್ರೋತ್ಸವ

ದ.ಕ.ಜಿ.ಪಂ.ಕಿ.ಪ್ರಾ ಶಾಲೆ ಮೆಟ್ಟಿನಡ್ಕದಲ್ಲಿ ಆ.15 ರಂದು 79 ನೇ ಸ್ವಾತಂತ್ರೋತ್ಸವ ಅತ್ಯಂತ ವಿಜೃಂಭಣೆಯಿಂದ  ಜರುಗಿತು.
ಧ್ವಜಾರೋಹಣ ವನ್ನು ಗ್ರಾಮ ಪಂಚಾಯತ್ ನ ಸದಸ್ಯರಾದ  ಶ್ರೀಮತಿ ಅನಿತಾ ರಮಾನಂದ  ರವರು ನೆರವೇರಿಸಿದರು.
ನಂತರ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳು, ಪೋಷಕರು, ಮತ್ತು ಶಿಕ್ಷಕರು ಸೇರಿ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ಸಾಗಿದರು.
ನಂತರ ಸಭಾಕಾರ್ಯಕ್ರಮ ನಡೆಯಿತು, ಸಭೆಯ
ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಮೇಶ್ ಮೆಟ್ಟಿನಡ್ಕ ವಹಿಸಿದ್ದರು.
ವೇದಿಕೆಯಲ್ಲಿ  ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು, ಹರಿಣಾಕ್ಷಿ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಅನಿತಾ ರಮಾನಂದ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಕಮಲ, ಶಾಲಾ ಮುಖ್ಯ ಶಿಕ್ಷಕಿ ಶ್ರಿಮತಿ ಗೀತಾಲಕ್ಷ್ಮಿ.ಎ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಭಾಷಣ ಹಾಗೂ ದೇಶಭಕ್ತಿಗೀತೆ ಕಾರ್ಯಕ್ರಮ ನಡೆಯಿತು. 
ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳಿಗೆ ದತ್ತಿನಿಧಿ ವಿತರಿಸಲಾಯಿತು.
SDMC ಉಪಾಧ್ಯಕ್ಷೆ ಶ್ರೀಮತಿ ಹರೀಣಾಕ್ಷಿ ಸ್ವಾಗತಿಸಿ, ಗೌರವ ಶಿಕ್ಷಕಿ ಶ್ರಿಮತಿ ರೇವತಿ ವಂದಿಸಿದರು.
ಮುಖ್ಯಶಿಕ್ಷಕಿ ಶ್ರಿಮತಿ ಗೀತಾಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.
ಹಿರಿಯ ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು, ಊರ ವಿದ್ಯಾಭಿಮಾನಿಗಳು  ಉಪಸ್ಥಿತರಿದ್ದರು.
ಪಂಚಾಯತ್ ವತಿಯಿಂದ  ಹಾಗೂ ಮಕ್ಕಳ ಪೋಷಕರು ಸಿಹಿತಿಂಡಿ ನೀಡಿದ್ದು ವಿತರಿಸಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading