Ad Widget

ಶೇಣಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ಶೇಣಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು 15 ಆಗಸ್ಟ್‌ ರಂದು ಅದ್ದೂರಿಯಾಗಿ ಆಚರಿಸಲಾಯಿತು.
ಬೆಳಿಗ್ಗೆ 9 ಗಂಟೆಗೆ ಎಸ್‌.ಡಿ.ಎಂ.ಸಿ. ಅಧ್ಯಕ್ಷರಾದ ಪ್ರಶಾಂತ್ ಪಾಡಾಜೆ ಅವರು ಧ್ವಜಾರೋಹಣ ನೆರವೇರಿಸಿದರು.
ನಂತರ ವಿದ್ಯಾರ್ಥಿಗಳಿಂದ ಜಾಥಾ ಮೆರವಣಿಗೆ ನಡೆಯಿತು.
ಈ ಸಂದರ್ಭದಲ್ಲಿ ಪೋಷಕರು ಹಾಗೂ ಊರಿನ ಅನೇಕ ಮಂದಿ ಭಾಗವಹಿಸಿದರು.
ಬೆಳಿಗ್ಗೆ 10:30ಕ್ಕೆ ಸಭಾ ಕಾರ್ಯಕ್ರಮ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಎಸ್‌.ಡಿ.ಎಂ.ಸಿ. ಅಧ್ಯಕ್ಷರಾದ ಪ್ರಶಾಂತ್ ಪಾಡಾಜೆ ವಹಿಸಿದರು.
ವೇದಿಕೆಯಲ್ಲಿ ಉಪಾಧ್ಯಕ್ಷೆ ಗಾಯತ್ರಿ.ಯು, ನಿವೃತ್ತ ಮುಖ್ಯೋಪಾಧ್ಯಾಯರಾದ ಲೋಕನಾಥ(ಮುಖ್ಯ ಅತಿಥಿಗಳಾಗಿ), ಎಸ್‌.ಡಿ.ಎಂ.ಸಿ. ನಾಮ ನಿರ್ದೇಶಕರಾದ ಮಾಧವ್ ಟಿ.ಪಿ, ತೋಟಗಾರಿಕೆ ಸಮಿತಿ ಉಪಾಧ್ಯಕ್ಷರಾದ ಜಗದೀಶ ಸಿ, ಅಂಗನವಾಡಿ ಕಾರ್ಯಕರ್ತೆ ಧರ್ಮಾವತಿ, ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಶ್ರೇಯಸ್ವಿ ಶೇಣಿ, ಶಾಲೆಯ ಮುಖ್ಯೋಪಾಧ್ಯಾಯರಾದ ವಿನಯ ಪ್ರಸಾದ್ ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆ ಕಾರ್ಯಕ್ರಮಗಳು ನಡೆಯಿತು.
ಮುಖ್ಯಅತಿಥಿಗಳಾದ ನಿವೃತ್ತ ಮುಖ್ಯೋಪಾಧ್ಯಾಯರಾದ ಲೋಕನಾಥ ಅವರು ದೇಶಭಕ್ತಿ ಗೀತೆಯ ಮೂಲಕ ದೇಶಪ್ರೇಮವನ್ನು ಹೂರಳಿಸಿ ಮಾತನಾಡಿದರು.
ಮುಖ್ಯೋಪಾಧ್ಯಾಯರು ಬ್ರಿಟಿಷರ ಆಗಮನದ ಹಿನ್ನೆಲೆ, ಅದರ ಕಾರಣಗಳು ಹಾಗೂ ದೇಶದ ಒಗ್ಗಟ್ಟಿನ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಹಾಜರಿದ್ದ ಎಲ್ಲ ಗಣ್ಯರು ಸ್ವಾತಂತ್ರ್ಯೋತ್ಸವದ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಎಸ್‌.ಡಿ.ಎಂ.ಸಿ. ಸರ್ವ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾಮಸ್ಥರು, ಶಾಲೆಯ ಶಿಕ್ಷಕರು, ಅಡುಗೆ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಅಂಗನವಾಡಿ ಪುಟಾಣಿಗಳು ಹರ್ಷೋತ್ಸಾಹದಿಂದ ಪಾಲ್ಗೊಂಡರು.
ಕಾರ್ಯಕ್ರಮದ ಕೊನೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಯಿತು. ಸಿಹಿ ಮತ್ತು ತಿಂಡಿ ಪಾಯೋಜಕರು–ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇಣಿ, ಸೃಜನ್ ಶೇಣಿ ಹಾಗೂ ಮಾಧವ್ ಟಿ.ಪಿ, ಆನಂದ ಪೂಜಾರಿ, ಶಾಲಾ ಎಸ್‌.ಡಿ.ಎಂ.ಸಿ ಸದಸ್ಯರಿಂದ ಪಲಾವ್ ಮತ್ತು ಚಹಾದ ವ್ಯವಸ್ಥೆಯೂ ಇತ್ತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading