Ad Widget

ಸುಳ್ಯ ನ್ಯಾಯಾಲಯದಲ್ಲಿ ವಿಶೇಷ ಮಧ್ಯಸ್ಥಿಕಾ ಅಭಿಯಾನ – ರಾಜಿ ಮಾಡಿಕೊಳ್ಳಲು ಅ.07 ರವರೆಗೆ ಅವಕಾಶ

ನ್ಯಾಯಾಲಯದಲ್ಲಿ “ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ” ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ಜುಲೈಯಿಂದ ಆರಂಭಗೊಂಡಿದ್ದು ಅಕ್ಟೋಬರ್ 7ರವರೆಗೆ ಅಭಿಯಾನ ನಡೆಯಲಿದೆ.
ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ ಪ್ರಕರಣಗಳು, ಡಿ.ಆ‌ರ್.ಟಿ. ಪ್ರಕರಣಗಳು, ಭೂ-ಸ್ವಾಧೀನ ಪ್ರಕರಣಗಳು ಹಾಗೂ ಇತರ ಸಿವಿಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಅಭಿಯಾನದಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ಸುಳ್ಯ ನ್ಯಾಯಾಲಯದಲ್ಲಿ ವಕೀಲರಾದ ದಳ ಸುಬ್ರಾಯ ಭಟ್, ಸುಕುಮಾರ್ ಕೊಡ್ತುಗುಳಿ, ನಳಿನ್ ಕುಮಾರ್  ಕೊಡ್ತುಗುಳಿ, ಭಾಸ್ಕರ್ ರಾವ್, ರವೀಂದ್ರನಾಥ ರೈ, ರಾಮಕೃಷ್ಣ ಎ. ಅವರು ಸೇರಿದಂತೆ ಒಟ್ಟು ಆರು ಮಂದಿ ಮಧ್ಯಸ್ಥಿಕೆ ಮಾಡಲು ವಕೀಲರಿದ್ದಾರೆ. ಫಲಾನುಭವಿಗಳು ಪ್ರಯೋಜನ ಪಡೆಯಬಹುದಾಗಿದೆ ಎಂದು ಸುಳ್ಯ ನ್ಯಾಯಾಲಯ ಪ್ರಕಟಣೆ ಮೂಲಕ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading