Ad Widget

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಂಬೆತ್ತಾಡಿ ಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಂಬೆತ್ತಾಡಿಯಲ್ಲಿ ಆಗಸ್ಟ್ 15ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು
ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ರಮೇಶ್.ಎಮ್ ನೆರವೇರಿಸಿದರು.
ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನುಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಮೇಶ ಎಂ ವಹಿಸಿದ್ದರು.
ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ಮಹೇಶ್ ಕುಮಾರ್ ಕರಿಕಳ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಹಿತನುಡಿಗಳನ್ನು ಆಡಿದರು.
ಮುಖ್ಯ ಅತಿಥಿಗಳಾಗಿ ಉಪಸಿತರಿದ್ದ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ಪವಿತ್ರ ಕುದ್ವ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗಣೇಶ ಭೀಮಗಳಿ ಇವರು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದೊಂದಿಗೆ ಶುಭ ನುಡಿಗಳನ್ನು ಆಡಿದರು.
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಯನ್ನು ನಡೆಸಲಾಯಿತು.
ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. 
ಈ ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಗಳು ಎಸ್.ಡಿ.ಎಂ.ಸಿ ಸದಸ್ಯರು, ನಿಕಟಪೂರ್ವ ಎಸ್
ಡಿ.ಎಂ.ಸಿಯ ಅಧ್ಯಕ್ಷರುಗಳು ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರುಗಳು, ಊರಿನ ವಿದ್ಯಾಭಿಮಾನಿಗಳು,     ಪೋಷಕರು, ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹಾಗೂ ಅಂಗನವಾಡಿ ಪುಟಾಣಿಗಳು ಭಾಗವಹಿಸಿದರು.
ವಿವಿಧ ಸಂಘ ಸಂಸ್ಥೆಗಳು ಹಾಗೂ ಪೋಷಕರು ಸಿಹಿಯನ್ನ ವಿತರಿಸಿದರು.  ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಭವ್ಯ.ಬಿ ಸ್ವಾಗತಿಸಿದರು ಗೌರವ ಶಿಕ್ಷಕ ಆಶ್ಲೇಷ ಕಲ್ಚಾರು ಬಹುಮಾನಿತರ ಪಟ್ಟಿಯನ್ನು ವಾಚಿಸಿದರು. ಅತಿಥಿ ಶಿಕ್ಷಕಿ ಶ್ರೀಮತಿ ಶಶಿಕಲಾ ಧನ್ಯವಾದ ಸಮರ್ಪಿಸಿದರು. ಹಾಗೂ ಅತಿಥಿ ಶಿಕ್ಷಕಿ ಮಮತಾಯವರು ಕಾರ್ಯಕ್ರಮವನ್ನು ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading