Ad Widget

ಇಂದು ಸುಳ್ಯದಲ್ಲಿ ಅದ್ದೂರಿ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ – ಸಮಾರೋಪ ಸಮಾರಂಭದಲ್ಲಿ ಚಕ್ರವರ್ತಿ ಸೂಲಿಬೆಲೆ ಭಾಗಿ

ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ ದುರ್ಗಾ ವಾಹಿನಿ ಸುಳ್ಯ ಪ್ರಖಂಡ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ 12ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಇಂದು (ಆ.19) ಸುಳ್ಯದಲ್ಲಿ ನಡೆಯಲಿದೆ.

. . . . . . . . .

ಸುಳ್ಯ ಚೆನ್ನಕೇಶವ ದೇವಸ್ಥಾನದ ಎದುರು ಆ.19 ರಂದು ಬೆಳಿಗ್ಗೆ ಎಣ್ಣೆ ಕಂಬ ಏರುವ ಸ್ಪರ್ಧೆ ಆರಂಭಗೊಂಡಿದೆ. ಅಪರಾಹ್ನ 2 ಗಂಟೆಗೆ ಆರಂಭಗೊಳ್ಳುವ ಮೊಸರು ಕುಡಿಕೆ ಉತ್ಸವ ಹಾಗೂ ಶೋಭಾ ಯಾತ್ರೆಗೆ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ಚಾಲನೆ ನೀಡಲಿದ್ದಾರೆ.

. . . . . . .

ಶೋಭಾಯಾತ್ರೆಯ ಜತೆಗೆ ನಗರದ ವಿವಿಧೆಡೆ ಹಾಕಿದ ಗೋಪುರ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ನಡೆಯಲಿದೆ. ಸಂಜೆ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಖ್ಯಾತ ವಾಗ್ನಿ ಚಕ್ರವರ್ತಿ ಸೂಲಿಬೆಲೆ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಬಾಲಚಂದ್ರ ಅಡ್ಕಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಘಚಾಲಕರಾದ ಚಂದ್ರಶೇಖರ ತಳೂರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ದೈವ ನರ್ತಕ ನರಸಿಂಗ ಪರವ ಸೋಣಂಗೇರಿ, ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಸಹ ಕಾರ್ಯದರ್ಶಿ ಶಿವಾನಂದ ಮೆಂಡನ್, ವಿಶ್ವ ಹಿಂದು ಪರಿಷತ್ ಪುತ್ತೂರು ಜಿಲ್ಲೆಯ ಸಹ ಕಾರ್ಯದರ್ಶಿ ಪ್ರಮೋದ್ ಕಡಬ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್‌ನ ಸುಳ್ಯ ಪ್ರಖಂಡದ ಅಧ್ಯಕ್ಷ ಶ್ರೀಕಾಂತ್‌ ಗೋಳ್ವಾಲ್ಕ‌ರ್ ಹಾಗೂ ಮೊಸರುಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಬಾಲಚಂದ್ರ ಅಡ್ಕಾರ್ ಉಪಸ್ಥಿತರಿರಲಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading