Ad Widget

ಆ.27 & 28 ರಂದು ವಳಲಂಬೆಯಲ್ಲಿ  ಗಣೇಶೋತ್ಸವ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 22 ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಆ.27 ಮತ್ತು 28 ರಂದು ನಡೆಯಲಿದೆ.
ಆ.27 ಬುಧವಾರ ಬೆಳಿಗ್ಗೆ 9 ಗಂಟೆಗೆ ಗಣಪತಿ ಪ್ರತಿಷ್ಠೆ, ನಂತರ ಸಾರ್ವಜನಿಕ ಗಣಪತಿ ಹವನ, ಗಂಟೆ 10 ರಿಂದ ಅಕ್ಷರಾಭ್ಯಾಸ ಮತ್ತು ಮಕ್ಕಳಿಗೆ ಕಿವಿ ಚುಚ್ಚುವ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಾರ್ವಜನಿಕರಿಗೆ,ಮಕ್ಕಳಿಗೆ ವಿವಿಧ ಸ್ಪರ್ಧೆ ಹಾಗೂ ಹಿಂದೂ ಬಾಂಧವರ ಮುಕ್ತ ವಾಲಿಬಾಲ್ ಪಂದ್ಯಾಟ ಬೆಳಿಗ್ಗೆ ಗಂಟೆ 10 ರಿಂದ ಆರಂಭವಾಗಲಿದೆ.
ಸಂಜೆ ಶಂಖಪಾಲ ಭಜನಾ ಸೇವಾ ಸಮಿತಿ ವಳಲಂಬೆ, ಶ್ರೀ ಕೃಷ್ಣ ಭಜನಾ ಮಂಡಳಿ ಗುತ್ತಿಗಾರು ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಸಂಜೆ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ವಿನೋದಾವಳಿ, ಶ್ರೀ ನಂದನ ಕಲಾ ಕುಟುಂಬ ಮೆಟ್ಟಿನಡ್ಕ ಇವರಿಂದ ಸಾಂಸ್ಕೃತಿಕ ಕಲಾ ವೈಭವ ಪ್ರದರ್ಶನಗೊಳ್ಳಲಿದೆ. ರಾತ್ರಿ ಗಂಟೆ 9 ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪೂರ್ಣಾನಂದ ರಾಮ ಈಶ್ವರಮಂಗಲ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಆ.28 ರಂದು ಬೆಳಿಗ್ಗೆ 8.30 ರಿಂದ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆ ನಡೆಯಲಿದೆ. ಬೆಳಿಗ್ಗೆ ಗಂಟೆ 10 ರಿಂದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ. ಮಧ್ಯಾಹ್ಮ ಮಹಾಪೂಜೆ, ಸಂಜೆ ಗಂಟೆ 3 ರಿಂದ ಶ್ರೀ ಗಣೇಶನ ಶೋಭಾಯಾತ್ರೆ ಆರಂಭವಾಗಲಿದೆ ಎಂದು ಗಣೇಶೋತ್ಸವ ಸಮಿತಿ ಅಧ್ಯಕ್ಷ ಹರಿಶ್ಚಂದ್ರ ಕೇಪಳಕಜೆ, ಕಾರ್ಯದರ್ಶಿ ದಿಗಂತ ಕಡ್ತಲ್ ಕಜೆ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading