Ad Widget

ಪೈಚಾರ್ ಪರಿಸರದಲ್ಲಿ ಹೆಚ್ಚಿದ ಬೀದಿ ನಾಯಿ ಹಾವಳಿ – ಆತಂಕದಲ್ಲಿ ಸಾರ್ವಜನಿಕರು

ಪೈಚಾರ್ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ. ವಿದ್ಯಾರ್ಥಿಗಳು ಶಾಲಾ–ಕಾಲೇಜುಗಳಿಗೆ ಹೋಗುವಾಗ, ಸಾರ್ವಜನಿಕರು ನಡೆದಾಡುವ ಭಯದಲ್ಲಿ ಸಂಚರಿಸುವಂತಾಗಿದೆ.  ಈಗಾಗಲೇ ಐದಾರು ಮಂದಿ ನಾಯಿಗಳಿಂದ ಕಚ್ಚಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪೈಚಾರ್ ಬಸ್ ನಿಲ್ದಾಣ, ಅಂಗಡಿ ಮುಂಗಟ್ಟು, ಹೋಟೆಲ್‌ ಸಮೀಪ ನಾಯಿಗಳ ದಂಡು ಬೀಡು ಬಿಟ್ಟಿರುತ್ತದೆ. ಈ ಪ್ರದೇಶಗಳಲ್ಲಿ ಜನ ಓಡಾಡಲು ಭಯಪಡುತ್ತಾರೆ. ಹಗಲಿನಲ್ಲಿ ಸಾಧುವಂತೆ ವರ್ತಿಸುವ ಶ್ವಾನಗಳು ಸಂಜೆಯಾಗುತ್ತಿದ್ದಂತೆ ಮೃಗದಂತೆ ಕೆರಳಿ ನಿಲ್ಲುತ್ತವೆ. ಈ ಸಮಯದಲ್ಲಿ ಮಕ್ಕಳು ಮತ್ತು ಸಾರ್ವಜನಿಕರು ಹೊರಬರಲು ಹೆದರುತ್ತಾರೆ. ಸೈಕಲ್‌ ಮತ್ತು ಬೈಕ್‌ ಸಂಚರಿಸುವ ವೇಳೆ ಹಿಂಬಾಲಿಸಿಕೊಂಡು ಬಂದು ದಾಳಿ ನಡೆಸುತ್ತವೆ. ಈ ಘಟನೆಯಲ್ಲಿ ಹಲವು ಮಂದಿ ಬಿದ್ದು ಗಾಯಗೊಂಡಿದ್ದಾರೆ. ಕಸದ ರಾಶಿ ನಾಯಿಗಳ ಮತ್ತೊಂದು ಅಡ್ಡೆಯಾಗಿದ್ದು, ತ್ಯಾಜ್ಯದಲ್ಲಿನ ಆಹಾರ ತಿನ್ನಲು ಶ್ವಾನಗಳ ಗುಂಪುಗಳ ನಡುವೆ ಕಾದಾಟ ನಡೆಯುತ್ತಲೆ ಇರುತ್ತದೆ. ಈ ವೇಳೆ ಚಲಿಸುವ ವಾಹನಗಳಿಗೆ ಅಡ್ಡ ಬಂದು ವಾಹನ ಸವಾರರು ಬೀಳುವುದು ಸಾಮಾನ್ಯವಾಗಿದೆ. ರಾತ್ರಿ ವೇಳೆ ನಾಯಿಗಳ ಕೂಗಾಟ, ಚೀರಾಟದಿಂದ ನೆಮ್ಮದಿಯ ನಿದ್ದೆ ಮಾಡಲು ತೊಂದರೆಯಾಗಿದೆ. ನಾಯಿಗಳ ಉಪಟಲಕ್ಕೆ ಕಡಿವಾಣ ಹಾಕಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ತಕ್ಷಣವೇ ಸ್ಥಳೀಯಾಡಳಿತ ಸ್ಪಂದಿಸಿ ಸೂಕ್ತವಾದ ಕ್ರಮ ಕೈಗೊಳ್ಳಲು  ಸಾರ್ವಜನಿಕರು ಒತ್ತಾಯಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading