Ad Widget

ಗುತ್ತಿಗಾರು :  ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಗುತ್ತಿಗಾರು ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಮಾಹಿತಿ ಕಾರ್ಯಗಾರ ಆ.26 ರಂದು ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಬಾಬು ಮಾಸ್ತರ್ ಅಚ್ರಪ್ಪಾಡಿಯವರು ದೀಪಪ್ರಜ್ವಲನೆ ಮಾಡಿ “ಶಾಲಾ ಮಕ್ಕಳು ದುಶ್ಚಟಗಳಿಂದ ದೂರವಿದ್ದು ಶಾಲಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು ಹಾಗೂ ಹಿರಿಯರಿಗೆ ಗೌರವ ಕೊಡುವುದರ ಜತೆಗೆ ಉತ್ತಮ ಸಮಾಜಮುಖಿ ಕೆಲಸಗಳನ್ನು ಮಾಡಿ ಕೀರ್ತಿವಂತರಾಗಿ” ಎಂದು ಶುಭ ಹಾರೈಸಿದರು.
ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಮಹತ್ವದ ಬಗ್ಗೆ ತರಬೇತುದಾರರಾದ ಲೋಕೇಶ್ ಪೀರನಮನೆ ಮಾತನಾಡಿ “ಉತ್ತಮ ಆರೋಗ್ಯಕ್ಕೆ ನಿಯಮಿತವಾದ ಯೋಗ ವ್ಯಾಯಾಮ ಅಗತ್ಯ, ಪೋಷಕರು ಮತ್ತು ವಿದ್ಯಾರ್ಥಿ ವೃಂದ ಉತ್ತಮ ಸಮಾಜಕ್ಕಾಗಿ ದುಶ್ಚಟ ದುರಾಭ್ಯಾಸದಿಂದ ಮುಕ್ತರಾಗಿ ಉತ್ತಮ ಪ್ರಜೆಯಾಗಿ ಬೆಳೆಯಿರಿ. ಹೃದಯಾಘಾತವಾದಾಗ ಪ್ರಥಮ ಚಿಕಿತ್ಸೆಯನ್ನು ಯಾವ ರೀತಿಯಲ್ಲಿ ಮಾಡಬಹುದೆಂದು” ಪ್ರಾತಿಕ್ಷಿತೆ ಮೂಲಕ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಶುಂಪಾಲರಾದ ಶ್ರೀಮತಿ ಚೆನ್ನಮ್ಮ ಮಾತನಾಡಿ  “ನಮ್ಮ ಮಕ್ಕಳು ಆರೋಗ್ಯವಂತರಾಗಿ ಕ್ರೀಡಾಸ್ಫೂರ್ತಿಯಿಂದ ಇದ್ದಾರೆ. ಉತ್ತಮ ಮಾಹಿತಿ ನೀಡಿದ ತಮಗೆಲ್ಲರಿಗೂ ಅಭಿನಂದನೆಗಳು” ಎಂದರು.
ವಲಯ ಮೇಲ್ವಿಚಾರಕರಾದ ರಾಜೇಶ್.ಪಿ ಪ್ರಾಸ್ತಾವಿಕವಾಗಿ ಮಾತನಾಡಿ “ಯೋಜನೆಯಿಂದ ದೊರೆಯುವ ಸೌಲಭ್ಯ ಹಾಗೂ ಸಮುದಾಯ ಅಭಿವೃದ್ಧಿಯಿಂದ ಶಾಲೆಗಳಿಗೆ ಜ್ಞಾನ ದೀಪ ಶಿಕ್ಷಕಿ ಹಾಗೂ ಬೆಂಚು-ಡೆಸ್ಕ್ ಗಳನ್ನು ನೀಡುವ ಬಗ್ಗೆ ಸುಜ್ಞಾನ ನಿಧಿ ಶಿಷ್ಯ ವೇತನ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಮಹತ್ವ”ವನ್ನು ತಿಳಿಸಿದರು.
ಕಾಲೇಜಿನ ಉಪನ್ಯಾಸಕರು ಸ್ವಾಗತಿಸಿ, ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading