Ad Widget

ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಿಚಾರಗೋಷ್ಠಿ

ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಾಲಾ ಶಿಕ್ಷಣ ಇಲಾಖೆ, ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಿಚಾರಗೋಷ್ಠಿ ನಡೆಯಿತು.
ಈ ಸ್ಪರ್ಧೆಯ ಉದ್ಘಾಟನೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶ್ರೀಮತಿ ಸೌಮ್ಯ ಭರತ್ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಗಣೇಶ್ ಪ್ರಸಾದ್ ವಹಿಸಿದ್ದರು.
ಈ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಶಿಕ್ಷಣ ಸಂಯೋಜಕರಾದ ಶ್ರೀಮತಿ ಸಂಧ್ಯಾ ಕುಮಾರಿ, ಶಾಲಾ ಸಂಚಾಲಕರಾದ ಚಂದ್ರಶೇಖರ್ ನಾಯರ್, ಸ್ಪರ್ಧೆಯ ನಿರ್ಣಾಯಕರಾದ ಲಕ್ಷ್ಮಣ ದೇವಸ್ಯ, ಶ್ರೀಮತಿ ದಿವ್ಯಶ್ರೀ ಲಕ್ಷ್ಮಣ ,ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯರತ್ನ ಉಪಸ್ಥಿತರಿದ್ದರು.
ಸ್ಪರ್ಧೆಯ ವಿಜೇತರು
ಪ್ರಥಮ ಸುಶ್ಮಿತಾ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಹಾಗೂ
ದ್ವಿತೀಯ ಆಹನ್ ರೋಟರಿ ಪ್ರೌಢಶಾಲೆ ಸುಳ್ಯ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಾರ್ಯಕ್ರಮವನ್ನು ಶಿಕ್ಷಕರಾದ ಯೋಗನಾಥ್ ನಿರೂಪಿಸಿ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading