Ad Widget

ದೇವಚಳ್ಳ : ಬೃಹತ್ ರಕ್ತದಾನ ಶಿಬಿರ – 108 ಬಾರಿ ರಕ್ತದಾನ ಮಾಡಿದ ಶೈಲೇಶ್ ಅಂಬೆಕಲ್ಲು ಅವರಿಗೆ ಗೌರವಾರ್ಪಣೆ

ಗ್ರಾಮ ಪಂಚಾಯತ್ ದೇವಚಳ್ಳ, ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ(ರಿ.), ಲಯನ್ಸ್ ಕ್ಲಬ್ ಸುಳ್ಯ, ಆರೋಗ್ಯ ಉಪಕೇಂದ್ರ ಎಲಿಮಲೆ ಮತ್ತು ಕಂದ್ರಪ್ಪಾಡಿ,  ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ, ಹಿರಿಯ ವಿದ್ಯಾರ್ಥಿಗಳ ಸಂಘ ಸರಕಾರಿ ಪ್ರೌಢಶಾಲೆ ಎಲಿಮಲೆ ಇವುಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಸೆ.04 ರಂದು ದೇವಚಳ್ಳ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಕೆವಿಜಿ ಸುಳ್ಯ ಹಬ್ಬ ಸಮಿತಿ ಅಧ್ಯಕ್ಷ ಕೆ.ಟಿ ವಿಶ್ವನಾಥ್ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ವಹಿಸಿದ್ದರು.
ಈ ಸಂದರ್ಭದಲ್ಲಿ ಕೆವಿಜಿ ಸುಳ್ಯ ಹಬ್ಬ ಸಮಿತಿ ಕಾರ್ಯದರ್ಶಿ ಹರೀಶ್ ಬಂಟ್ವಾಳ್, ಕೋಶಾಧಿಕಾರಿ ಚಂದ್ರಾವತಿ ಬಡ್ಡಡ್ಕ, ಲಯನ್ಸ್ ಕ್ಲಬ್ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಲಯನ್ಸ್ ಕಾರ್ಯದರ್ಶಿ ಮಲ್ಲಿಕಾರ್ಜುನ ಪ್ರಸಾದ್, ಲಯನ್ಸ್ ಕೋಶಾಧಿಕಾರಿ ಜತ್ತಪ್ಪ ರೈ,  ಪಿಡಿಒ ಗುರುಪ್ರಸಾದ್ , ಎನ್.ಎ. ಜ್ಞಾನೇಶ್ , ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಅಂಬೆಕಲ್ಲು, ರೋಟರಿ ಬ್ಲಡ್ ಬ್ಯಾಂಕ್ ಪಿಆರ್ ಓ ಕುಲದೀಪ್, ರೋಟರಿ ಬ್ಲಡ್ ಬ್ಯಾಂಕ್ ಟೆಕ್ನಿಕಲ್ ಸೂಪರ್ವೈಸರ್ ಶ್ರೀಮತಿ ಸಜನಿ ಮಾರ್ಟಿಸ್, ರಕ್ತದಾನಿಗಳು, ಆರೋಗ್ಯ ಇಲಾಖೆ ಹಾಗೂ ಗ್ರಾ.ಪಂ.ಸಿಬ್ಬಂದಿಗಳು ಉಪಸ್ಥಿತರಿದ್ದರು.‌ 
ಈ ಸಂದರ್ಭದಲ್ಲಿ 108 ಬಾರಿ ರಕ್ತದಾನ ಮಾಡಿದ ಶೈಲೇಶ್ ಅಂಬೆಕಲ್ಲು ಅವರನ್ನು ಸನ್ಮಾನಿಸಲಾಯಿತು.

. . . . . . . . .

ಶೈಲೇಶ್ ಅಂಬೆಕಲ್ಲು 108 ಹಾಗೂ ರಾಜೇಶ್ ಅಂಬೆಕಲ್ಲು  63 ನೇ ಬಾರಿ ಸೇರಿದಂತೆ ಒಟ್ಟು 45 ಜನ ರಕ್ತದಾನ ಮಾಡಿದ್ದಾರೆ. ಶೈಲೇಶ್ ಅಂಬೆಕಲ್ಲು ಸ್ವಾಗತಿಸಿ,  ರಾಜೇಶ್ ಅಂಬೆಕಲ್ಲು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

. . . . . . .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading