Ad Widget

ಕುಕ್ಕೆ ಸುಬ್ರಹ್ಮಣ್ಯ : ನಾಳೆ(ಸೆ.07) ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ “ಉಚಿತ ಬೃಹತ್ ವೈದ್ಯಕೀಯ ಶಿಬಿರ”

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್(ರಿ.) ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ-ಅಧಿಕಾರಿ ವರ್ಗ ಹಾಗೂ ನೌಕರವೃಂದ, ಶ್ರೀ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠ, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಸುದ್ದಿ ಸುಳ್ಯ ಹಬ್ಬ ಸುಬ್ರಹ್ಮಣ್ಯ ಗ್ರಾಮ ಸಮಿತಿ, ಜೆ.ಸಿ.ಐ ಸುಬ್ರಹ್ಮಣ್ಯ ಕುಕ್ಕೆಶ್ರೀ, ಇನ್ನರ್ ವ್ಹೀಲ್ ಕ್ಲಬ್ ಸುಬ್ರಹ್ಮಣ್ಯ, ಕುಕ್ಕೆಶ್ರೀ ಆಟೋ ಚಾಲಕ-ಮ್ಹಾಲಕರ ಸಂಘ(ರಿ.) ಸುಬ್ರಹ್ಮಣ್ಯ, ಬಿ.ಎಂ.ಎಸ್ ಆಟೋ ಚಾಲಕ-ಮ್ಹಾಲಕರ ಸಂಘ(ರಿ.) ಸುಬ್ರಹ್ಮಣ್ಯ, ಸುಬ್ರಹ್ಮಣ್ಯ ಟ್ಯಾಕ್ಸಿ ಮ್ಹಾಲಕ-ಚಾಲಕರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್(ರಿ.), ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಪೋಲೀಸ್ ಠಾಣೆ, ಓಂ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ, ಅನುಗ್ರಹ ಎಜ್ಯುಕೇಶನ್ ಟ್ರಸ್ಟ್ ಸುಬ್ರಹ್ಮಣ್ಯ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸುಬ್ರಹ್ಮಣ್ಯ, ಕುಕ್ಕೆಶ್ರೀ ಟ್ಯಾಕ್ಸಿ ಮತ್ತು ಗೂಡ್ಸ್ ಚಾಲಕ-ಮ್ಹಾಲಕರ ಸಂಘ(ರಿ.) ಸುಬ್ರಹ್ಮಣ್ಯ, ಶ್ರೀ ಶಕ್ತಿ ಗುಂಪುಗಳು ಹಾಗೂ ವಾಣಿ ವನಿತಾ ಸಮಾಜ(ರಿ.) ಸುಬ್ರಹ್ಮಣ್ಯ, ನವೋದಯ ಸ್ವ-ಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ, ಅಖಿಲ ಭಾರತ ಅಯ್ಯಪ್ಪ ಸೇವಾ ಸಂಘ ಸುಬ್ರಹ್ಮಣ್ಯ, ವರ್ತಕರ ಸಂಘ ಸುಬ್ರಹ್ಮಣ್ಯ, ಹೊಸಬೆಳಕು ಚಾರಿಟೇಬಲ್ ಟ್ರಸ್ಟ್(ರಿ.) ಸುಬ್ರಹ್ಮಣ್ಯ ಇವುಗಳ ಆಶ್ರಯದಲ್ಲಿ ಕೆ.ವಿ.ಜಿ ವೈದ್ಯಕೀಯ ಆಸ್ಪತ್ರೆ ಮತ್ತು ಮಹಾವಿದ್ಯಾಲಯ ಸುಳ್ಯ ಇವುಗಳ ಸಹಯೋಗದಲ್ಲಿ ನಾಳೆ ಸೆ.07 ಆದಿತ್ಯವಾರದಂದು ಪೂರ್ವಾಹ್ನ 9:00 ಗಂಟೆಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿ ಇರುವ ನೂತನ ಧರ್ಮ ಸಮ್ಮೇಳನ ಮಂಟಪದಲ್ಲಿ “ಉಚಿತ ಬೃಹತ್ ವೈದ್ಯಕೀಯ ಶಿಬಿರ”ವು ನಡೆಯಲಿದ್ದು, ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಈ ಶಿಬಿರವನ್ನು ಉದ್ಘಾಟಿಸಲಿದ್ದಾರೆ.
ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ| ರವಿ ಕಕ್ಕೆಪದವು ರವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷರು ಹಾಗೂ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ| ಕೆ.ವಿ ಚಿದಾನಂದ ರವರು ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದ ಅತಿಥಿಗಳಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತ ಕಲ್ಲಾಜೆ ಉಪಸ್ಥಿತರಿರಲಿದ್ದಾರೆ.
ಈ ಸಂದರ್ಭದಲ್ಲಿ ಸುಳ್ಯದ ಸುದ್ದಿ ಬಿಡುಗಡೆ ವಾರಪತ್ರಿಕೆಯ ಸಂಪಾದಕರಾದ ಹರೀಶ್ ಬಂಟ್ವಾಳ್ ರವರನ್ನು ಹಾಗೂ ಮಂಗಳೂರು ಪ್ರೆಸ್ ಕ್ಲಬ್ ನ ಅಧ್ಯಕ್ಷರಾದ ಪಿ.ಬಿ ಹರೀಶ್ ರೈ ಅವರನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ರವರು ಸನ್ಮಾನಿಸಲಿದ್ದಾರೆ.
ಎಲ್ಲಾ ಸಂಘ-ಸಂಸ್ಥೆಗಳ ಅಧ್ಯಕ್ಷರುಗಳು ಹಾಗೂ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.
ಈ ಉಚಿತ ವೈದ್ಯಕೀಯ ಶಿಬಿರದಲ್ಲಿ ಜನರಲ್ ಮೆಡಿಸಿನ್ ವಿಭಾಗ, ಶಸ್ತ್ರಚಿಕಿತ್ಸಾ ವಿಭಾಗ, ಮಕ್ಕಳ ರೋಗ, ಕಿವಿ-ಮೂಗು-ಗಂಟಲು ವಿಭಾಗ, ನೇತ್ರಾ ಚಿಕಿತ್ಸಾ ವಿಭಾಗ, ಚರ್ಮ ಮತ್ತು ಲೈಂಗಿಕ ರೋಗ ವಿಭಾಗ, ಸ್ತ್ರೀ ರೋಗ ವಿಭಾಗ, ಎಲುಬು ಮತ್ತು ಕೀಲು ವಿಭಾಗ ಹಾಗೂ ಶ್ವಾಸಕೋಶ ವಿಭಾಗದ ತಜ್ಞ ವೈದ್ಯರುಗಳು ಉಪಸ್ಥಿತರಿರಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಉಚಿತ ವೈದ್ಯಕೀಯ ಶಿಬಿರದಲ್ಲಿ ಭಾಗವಹಿಸಿ ಈ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ಶಿಬಿರದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading