Ad Widget

ಸುಳ್ಯ : ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

“ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ” : ದಯಾಮಣಿ.ಕೆ

ಭಾರತದ ದ್ವಿತೀಯ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣ ರವರ ಜನ್ಮದಿನವಾದ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆ  ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ ರವರು ವಹಿಸಿ “ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ತುಂಬಾ ಇದೆ ಮತ್ತು ಒಬ್ಬ ನೈಜ ಶಿಕ್ಷಕ ವಿದ್ಯಾರ್ಥಿಯನ್ನು ಪ್ರೀತಿಯಿಂದ ಕಾಣಬೇಕೆಂದು” ಹೇಳಿದರು.  ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸ್ವರ್ಣಕಲಾ.ಎ.ಎಸ್ ರವರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳು ಉಪನ್ಯಾಸಕರುಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಿದರು.
ವಿದ್ಯಾರ್ಥಿನಿ ಕುಮಾರಿ ಶ್ರೇಯ ಸರ್ವರನ್ನು ಸ್ವಾಗತಿಸಿ, ವಿದ್ಯಾರ್ಥಿನಿಯರಾದ ಶ್ರೀ ವಲ್ಲಿ ಮತ್ತು ತನುಜ್ಞ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳು ಉಪನ್ಯಾಸಕರುಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನವನ್ನು ನೀಡಿ ಗೌರವಿಸಿದರು.
ಸಂಸ್ಥೆಯ ಉಪನ್ಯಾಸಕ  ಮತ್ತು ಬೋಧಕೇತರ ವೃಂದದವರು ಮನರಂಜನಾ ಕಾರ್ಯಕ್ರಮವನ್ನು ನೀಡಿ ವಿದ್ಯಾರ್ಥಿಗಳನ್ನು ಮನರಂಜಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading