Ad Widget

ಬೆಳ್ಳಾರೆ ಜ್ಞಾನದೀಪದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ ನಡೆಯಿತು.
ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಅಧ್ಯಕ್ಷ ವಿಶ್ವನಾಥ ಕೊಳಂಬಳ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಓಣಂ ಮತ್ತು ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು.
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಪೂರ್ವಾಧ್ಯಕ್ಷ ಎ ಕೆ ಮಣಿಯಾಣಿ, ಬೆಳ್ಳಾರೆ ಗ್ರಂಥಾಲಯದ ಗ್ರಂಥಾಲಯ ಮೇಲ್ವಿಚಾರಕಿ ಶಶಿಕಲಾ, ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ಗಗನ್ ಎಂ ಎಸ್ ಉಪಸ್ಥಿತರಿದ್ದರು.
ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿ ಚಿತ್ರಾ ಕಾರ್ಯಕ್ರಮ ನಿರ್ವಹಿಸಿದರು.
ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರು ಹಾಗೂ ಸಂಸ್ಥೆಯ ವಿದ್ಯಾರ್ಥಿನಿಯರು ಆಕರ್ಷಕ ಪೂಕಳಂ ರಚಿಸಿ ಓಣಂ ನೃತ್ಯ ಪ್ರದರ್ಶಿಸಿದರು.
ಶಿಕ್ಷಕರ ದಿನಾಚರಣೆಯ ಅಂಗವಾಗಿ ಸಂಸ್ಥೆಯ ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading