ಕುಕ್ಕೆ ಸುಬ್ರಹ್ಮಣ್ಯ : ತಾಲೂಕು ಮಟ್ಟದ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟ ; “ಬದುಕಿನಲ್ಲಿ ಆರೋಗ್ಯ ಸಮೃದ್ಧಿಯ ಅಧಿಕ್ಯತೆಗೆ ಕ್ರೀಡಾ ಚಟುವಟಿಕೆಗಳು ಪೂರಕ” : ಅಶೋಕ್ ನೆಕ್ರಾಜೆ ಅಭಿಮತ

ಸುಬ್ರಹ್ಮಣ್ಯ : “ಪಠ್ಯದೊಂದಿಗೆ ಪಠ್ಯೇತರ ಚಟಿವಟಿಕೆಗಳು ವಿದ್ಯಾರ್ಥಿಗಳ ಬದುಕಿಗೆ ಪೂರಕವಾಗುತ್ತದೆ. ಆರೋಗ್ಯ ಸಮೃದ್ದಿಯ ಔನತ್ಯಕ್ಕೆ ಕ್ರೀಡಾ ಚಟುವಟಿಕೆಗಳ ಪಾತ್ರ ಅನನ್ಯ. ಪಂದ್ಯಾಟಗಳು ಕ್ರೀಡಾಳುಗಳು ಕ್ರೀಡಾಸ್ಪೂರ್ತಿಯನ್ನು ಮೈಗೂಡಿಸಿಕೊಳ್ಳಬೇಕು. ಇದರಿಂದ ಈ ಕ್ಷೇತ್ರದಲ್ಲಿ ಉನ್ನತ ಸ್ಥಾನ ಪ್ರಾಪ್ರವಾಗುತ್ತದೆ” ಎಂದು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ್ ನೆಕ್ರಾಜೆ ಹೇಳಿದರು. ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನ ಆಶ್ರಯದಲ್ಲಿ ಸೆ.09 ಮಂಗಳವಾರದಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಕಡಬ ತಾಲೂಕು ಮಟ್ಟದ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಶಿಸ್ತು ಮತ್ತು ಕಠಿಣ ಪರಿಶ್ರಮ ಕ್ರೀಡಾಳುಗಳ ಆಸ್ತಿ. ಪರಿಶ್ರಮಯುಕ್ತ ಅಭ್ಯಾಸ ಕೂಡಾ ಕ್ರೀಡಾಳುಗಳಿಗೆ ಅಗತ್ಯ” ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷರಾದ ಸುಜಾತಾ ಕಲ್ಲಾಜೆ ವಹಿಸಿದ್ದರು.
ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್, ತಾಲೂಕು ಕ್ರೀಡಾ ಮಂಡಳಿ ಸಂಚಾಲಕರಾದ ಹ್ಯಾರಿಸ್, ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ರಾಧಾಕೃಷ್ಣ ಚಿದ್ಗಲ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ತ್ರಿವೇಣಿ ದಾಮ್ಲೆ, ಉಪಾಧ್ಯಕ್ಷರಾದ ಗುಣವರ್ಧನ ಕೆದಿಲ, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಲೋಕೇಶ್ ಬಿ.ಎನ್, ಉಪನ್ಯಾಸಕರಾದ ಸವಿತಾ ಕೈಲಾಸ್, ಕ್ರೀಡಾ ಕಾರ್ಯದರ್ಶಿ ಧನುಶ್ ಕಾಶಿಕಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading